Government servant Archives - Law Guide Kannada https://www.lawguidekannada.com/tag/government-servant/ Online Guide Sun, 11 Aug 2024 16:24:04 +0000 en-US hourly 1 https://wordpress.org/?v=6.9.4 http://www.lawguidekannada.com/wp-content/uploads/2022/09/cropped-Logo_512-32x32.jpg Government servant Archives - Law Guide Kannada https://www.lawguidekannada.com/tag/government-servant/ 32 32 ವರ್ಗಾವಣೆ: ವಿಶೇಷ ಚೇತನ ಸರ್ಕಾರಿ ನೌಕರರಿಗೆ ಸ್ಪೆಷಲ್ ರಿಯಾಯಿತಿ ಘೋಷಣೆ http://www.lawguidekannada.com/transfer-announcement-of-special-concessions-for-special-purpose-government-employees/ Sun, 11 Aug 2024 16:24:04 +0000 https://www.lawguidekannada.com/?p=608 ಬೆಂಗಳೂರು: ವರ್ಗಾವಣೆಯಲ್ಲಿವಿಶೇಷ ಚೇತನ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷವಾದ ಕೆಲವು ರಿಯಾಯಿತಿಗಳನ್ನು ನೀಡಿ ಆದೇಶ ಹೊರಡಿಸಿದೆ. ಈ ಕುರಿತು...

The post ವರ್ಗಾವಣೆ: ವಿಶೇಷ ಚೇತನ ಸರ್ಕಾರಿ ನೌಕರರಿಗೆ ಸ್ಪೆಷಲ್ ರಿಯಾಯಿತಿ ಘೋಷಣೆ appeared first on Law Guide Kannada.

]]>
ಬೆಂಗಳೂರು: ವರ್ಗಾವಣೆಯಲ್ಲಿವಿಶೇಷ ಚೇತನ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷವಾದ ಕೆಲವು ರಿಯಾಯಿತಿಗಳನ್ನು ನೀಡಿ ಆದೇಶ ಹೊರಡಿಸಿದೆ.
ಈ ಕುರಿತು ಸರ್ಕಾರ ವಿಸ್ತ್ರತವಾದ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು ದಿನಾಂಕ 12-06-2024 ರಂದು ಹೊರಡಿಸಿದ ಸುತ್ತೋಲೆಯಲ್ಲಿ ವಿವರ ಮಾಡಲಾಗಿದೆ.

ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕೆಳಕಂಡ ಕೆಲ ವಿಶೇಷ ರಿಯಾಯಿತಿ ಘೋಷಿಸಲಾಗಿದೆ.

ವಿಶೇಷ ಚೇತನ ಸರ್ಕಾರಿ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡಲಾಗುವುದು.

ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಇವರುಗಳು ತೀವ್ರ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಅಥವಾ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್‌ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಿದ್ದಲ್ಲಿ ಅಂತಹ ನೌಕರರಿಗೆ ಸಂಬಂಧಿಸುವ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೆ ಒಳಪಟ್ಟು ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕೆ ವರ್ಗಾವಣೆಯಿಂದ ವಿನಾಯಿತಿ ಪಡೆಯಬಹುದು ಮತ್ತು ಇಂತಹ ನೌಕರರಿಗೆ ಸಾಧ್ಯವಾದ್ದು ಹತ್ತಿರ ಸ್ಥಳ ನಿಯೋಜಿಸಬೇಕು.

ವಿಶೇಷ ಚೇತನರು ನೇಮಕಾತಿಗೆ ಆಯ್ಕೆಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial Posting) ಹಾಗೂ ಪದೋನ್ನತಿ ನಂತರದಲ್ಲಿ ಅವರ ವರ್ಗಾವಣೆ ಅಗತ್ಯವಾಗಿದ್ದರೆ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.

ಸೇವ ನಿರತ ಸರ್ಕಾರಿ ನೌಕರರು ತಮ್ಮ ಸೇವಾ ಅವಧಿಯಲ್ಲಿ ಅಂಗವೈಕಲ್ಯ ಅನುಭವಿಸಿದ್ದರೆ, ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣಕರ್ತರನ್ನು ಹಾಜರುಡಿಸುವ ಷರತ್ತಿಗೆ ಒಳಪಟ್ಟು ಅವರನ್ನು ತಾವು ಬಯಸಿದ ಹತ್ತಿರದ ಸ್ಥಳಕ್ಕೆ ವರ್ಗಾಯಿಸಲಾಗುವುದು.

ಸಾರ್ವತ್ರಿಕ ವರ್ಗಾವಣೆಯ ಅವಧಿಯಲ್ಲಿ ಅಂಗವಿಕಲ ನೌಕರರಿಗೆ ತೊಂದರೆಯಾಗದಂತೆ ಎಲ್ಲ ಸಕ್ಷಮ ಪ್ರಾಧಿಕಾರದ ಎಚ್ಚರಿಕೆಯನ್ನು ವಹಿಸಬೇಕು ಎಂದು ತಿಳಿಸಲಾಗಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post ವರ್ಗಾವಣೆ: ವಿಶೇಷ ಚೇತನ ಸರ್ಕಾರಿ ನೌಕರರಿಗೆ ಸ್ಪೆಷಲ್ ರಿಯಾಯಿತಿ ಘೋಷಣೆ appeared first on Law Guide Kannada.

]]>