Section 447 (criminal trespass) Archives - Law Guide Kannada https://www.lawguidekannada.com/tag/section-447-criminal-trespass/ Online Guide Wed, 16 Oct 2024 16:42:26 +0000 en-US hourly 1 https://wordpress.org/?v=7.0 http://www.lawguidekannada.com/wp-content/uploads/2022/09/cropped-Logo_512-32x32.jpg Section 447 (criminal trespass) Archives - Law Guide Kannada https://www.lawguidekannada.com/tag/section-447-criminal-trespass/ 32 32 ಮಸೀದಿ ಬಳಿ ‘ಜೈ ಶ್ರೀರಾಮ್ ಘೋಷಣೆ’ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಇಲ್ಲ : ಹೈಕೋರ್ಟ್ ಅಭಿಪ್ರಾಯ http://www.lawguidekannada.com/shouting-jai-shri-ram-near-a-mosque-does-not-harm-religious-sentiments-high-court/ Wed, 16 Oct 2024 16:28:15 +0000 http://www.lawguidekannada.com/?p=896 ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಸೀದಿಯೊಳಗೆ ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಂಧಿತರಾಗಿದ್ದ...

The post ಮಸೀದಿ ಬಳಿ ‘ಜೈ ಶ್ರೀರಾಮ್ ಘೋಷಣೆ’ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಇಲ್ಲ : ಹೈಕೋರ್ಟ್ ಅಭಿಪ್ರಾಯ appeared first on Law Guide Kannada.

]]>
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಸೀದಿಯೊಳಗೆ ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಇಬ್ಬರು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಒಂದು ರಾತ್ರಿ ಸ್ಥಳೀಯ ಮಸೀದಿಗೆ ಪ್ರವೇಶಿಸಿ “ಜೈ ಶ್ರೀ ರಾಮ್” ಎಂದು ಕೂಗಿದ್ದರು.

ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸ್ಥಳೀಯ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 ಎ (ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ), 447 (ಕ್ರಿಮಿನಲ್ ಅತಿಕ್ರಮಣ) ಮತ್ತು 506 (ಕ್ರಿಮಿನಲ್ ಬೆದರಿಕೆ) ಸೇರಿದಂತೆ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಎಫ್ ಐಆರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಎರಡನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿನ ಎಲ್ಲಾ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಇಬ್ಬರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮಸೀದಿ ಬಳಿ ‘ಜೈ ಶ್ರೀರಾಮ್ ಘೋಷಣೆ’ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

“ದೂರುದಾರರು ಖುದ್ದು ಹೇಳಿರುವಂತೆ ಆ ಭಾಗದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿದ್ದಾರೆ. ಆದರೆ, ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 295 ಎ ( ಧರ್ಮ, ಧಾರ್ಮಿಕ ಭಾವನೆ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂದು ಅರ್ಥವಾಗುತ್ತಿಲ್ಲ. ಜೊತೆಗೆ ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಮಹೇಂದ್ರ ಸಿಂಗ್ ಧೋನಿ ವರ್ಸಸ್ ಯರ್ರಗುಂಟ್ಲ ಶ್ಯಾಮಸುಂದರ್ (2017) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ತೀರ್ಪನ್ನು ಉಲ್ಲೇಖಿಸಿರುವ ಪೀಠವು, ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರದ ಹೋರತಾಗಿ ಯಾವುದೇ ಪ್ರಕರಣವು ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಪ್ರಕರಣ ರದ್ದುಗೊಳಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಬಿ ಎಸ್ ಸಚಿನ್ ಅವರು “ಅರ್ಜಿದಾರರ ವಿರುದ್ಧದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು, ಮಸೀದಿಯೂ ಸಾರ್ವಜನಿಕ ಸ್ಥಳವಾಗಿದ್ದು ಅದನ್ನು ಪ್ರವೇಶಿಸಿದ ಮಾತ್ರಕ್ಕೆ ಅತಿಕ್ರಮಣ ಮಾಡಿದ್ದಾರೆ ಎಂದು ಆಪಾದನೆ ಮಾಡುವುದು ಒಪ್ಪುವಂತದಲ್ಲ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು” ಎಂದು ಮನವಿ ಮಾಡಿದ್ದರು.

ಸರ್ಕಾರದ ಪರ ವಾದಿಸಿದ್ದ ವಕೀಲೆ ಸೌಮ್ಯಾ ಅವರು “ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ. ಹಾಗಾಗಿ ಆರೋಪಿಗಳ ಮನವಿಯನ್ನು ತಿರಸ್ಕರಿಸಬೇಕು” ಎಂದು ಕೋರಿದ್ದರು.

ಏನಿದು ಪ್ರಕರಣ
ಸೆಪ್ಟೆಂಬರ್ 24 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಬದ್ರಿಯಾ ಜುಮ್ಮಾ ಮಸೀದಿಯ ಆವರಣಕ್ಕೆ ರಾತ್ರಿ ಸುಮಾರು 10.50 ರ ಸಮಯಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದು, ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದಾರೆ ಎಂದು ಆರೋಪಿಸಿ ಮಸೀದಿ ಸಿಬ್ಬಂದಿ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ದೂರಿನ ಅನ್ವಯ ಆರೋಪಿಗಳಿಬ್ಬರ ವಿರುದ್ಧ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ), 505 (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 34 (ಸಾಮಾನ್ಯ ಉದ್ದೇಶ) ಮತ್ತು 295 ಎ ಅಡಿ ಎಫ್ಐಆರ್ ದಾಖಲಿಸಲಾಗಿತ್ತು. ಇದರ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post ಮಸೀದಿ ಬಳಿ ‘ಜೈ ಶ್ರೀರಾಮ್ ಘೋಷಣೆ’ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಇಲ್ಲ : ಹೈಕೋರ್ಟ್ ಅಭಿಪ್ರಾಯ appeared first on Law Guide Kannada.

]]>