Supreme Court Bar Association Archives - Law Guide Kannada https://www.lawguidekannada.com/tag/supreme-court-bar-association/ Online Guide Wed, 29 Oct 2025 16:11:28 +0000 en-US hourly 1 https://wordpress.org/?v=6.9.4 http://www.lawguidekannada.com/wp-content/uploads/2022/09/cropped-Logo_512-32x32.jpg Supreme Court Bar Association Archives - Law Guide Kannada https://www.lawguidekannada.com/tag/supreme-court-bar-association/ 32 32 CJI ಬಿ.ಆರ್ ಗವಾಯಿ ಮೇಲೆ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ದ ನ್ಯಾಯಾಂಗ ನಿಂದನೆ ಕ್ರಮ ಕೈಬಿಟ್ಟ ಸುಪ್ರೀಂ http://www.lawguidekannada.com/shoe-thrown-at-cji-b-r-gavai-supreme-court-drops-contempt-proceedings-against-lawyer-rakesh-kishor/ Wed, 29 Oct 2025 16:11:28 +0000 http://www.lawguidekannada.com/?p=2642 ನವದೆಹಲಿ: ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ವಿಚಾರಣೆ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ...

The post CJI ಬಿ.ಆರ್ ಗವಾಯಿ ಮೇಲೆ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ದ ನ್ಯಾಯಾಂಗ ನಿಂದನೆ ಕ್ರಮ ಕೈಬಿಟ್ಟ ಸುಪ್ರೀಂ appeared first on Law Guide Kannada.

]]>
ನವದೆಹಲಿ: ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ವಿಚಾರಣೆ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸುಪ್ರೀಂಕೋರ್ಟ್ ಕೈಬಿಟ್ಟಿದೆ.

ಅಕ್ಟೋಬರ್ 6 ರಂದು ಈ ಘಟನೆ ನಡೆದಿತ್ತು. ವಿಷ್ಣು ವಿಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿಚಾರಣೆ ವೇಳೆಯಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ವಕೀಲ ರಾಕೇಶ್ ಕಿಶೋರ್ ಯತ್ನಿಸಿದ್ದರು.

ರಾಕೇಶ್ ಕಿಶೋರ್ ಅವರ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಎಸ್ಸಿಬಿಎ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.

ಈ ಮಧ್ಯೆ ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೈಬಿಡಲಾಗಿದ್ದು, ಈ ಬಗ್ಗೆ ಒಲವು ಹೊಂದಿಲ್ಲ ಸುಪ್ರೀಂ ಕೋರ್ಟ್ ಹೇಳಿದೆ. ಸ್ವತಃ ಸಿಜೆಐ ಅವರೇ ವಕೀಲರ ವಿರುದ್ಧ ಪ್ರಕ್ರಿಯೆ ಮುಂದುವರಿಯಲು ನಿರಾಕರಿಸಿದ್ದಾರೆ.

ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (SCBA) ಗೆ ತಿಳಿಸಿದೆ.

ನ್ಯಾಯಾಲಯದಲ್ಲಿ ಘೋಷಣೆ ಕೂಗುವುದು ಮತ್ತು ಶೂ ಎಸೆಯುವುದು ನ್ಯಾಯಾಂಗ ನಿಂದನೆಯ ಸ್ಪಷ್ಟ ಪ್ರಕರಣಗಳಾಗಿವೆ. ಆದರೆ ಇದು ಸಂಬಂಧಪಟ್ಟ ನ್ಯಾಯಾಧೀಶರ ಮೇಲೆ ಅವಲಂಬಿತವಾಗಿದೆ. ಅಂತಹ ಘಟನೆಗಳನ್ನು ತಡೆಯಲು ಮಾರ್ಗಸೂಚಿಗಳನ್ನು ಹಾಕುವುದನ್ನು ಪರಿಗಣಿಸುವುದಾಗಿ ನ್ಯಾಯಪೀಠ ತಿಳಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post CJI ಬಿ.ಆರ್ ಗವಾಯಿ ಮೇಲೆ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ದ ನ್ಯಾಯಾಂಗ ನಿಂದನೆ ಕ್ರಮ ಕೈಬಿಟ್ಟ ಸುಪ್ರೀಂ appeared first on Law Guide Kannada.

]]>
ವಕೀಲರ ಸಂಘದಲ್ಲಿ ರಾಜಕೀಯ ನಾಯಕರ ಆಯ್ಕೆಗೆ ನಿರ್ಬಂಧ ಕೋರಿ ಅರ್ಜಿ: ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ http://www.lawguidekannada.com/petition-seeking-restriction-on-election-of-political-leaders-in-bar-association-important-order-from-supreme-court/ Mon, 09 Dec 2024 14:05:06 +0000 http://www.lawguidekannada.com/?p=1121 ನವದೆಹಲಿ: ವಕೀಲರ ಸಂಘದಲ್ಲಿ ರಾಜಕೀಯ ನಾಯಕರ ಆಯ್ಕೆಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಾಜಕೀಯ...

The post ವಕೀಲರ ಸಂಘದಲ್ಲಿ ರಾಜಕೀಯ ನಾಯಕರ ಆಯ್ಕೆಗೆ ನಿರ್ಬಂಧ ಕೋರಿ ಅರ್ಜಿ: ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ appeared first on Law Guide Kannada.

]]>
ನವದೆಹಲಿ: ವಕೀಲರ ಸಂಘದಲ್ಲಿ ರಾಜಕೀಯ ನಾಯಕರ ಆಯ್ಕೆಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಾಜಕೀಯ ಸಿದ್ಧಾಂತಗಳನ್ನು ಹೊಂದಿರುವ ವ್ಯಕ್ತಿಗಳು ವಕೀಲರ ಸಂಘಗಳಲ್ಲಿ ಕಾರ್ಯಕಾರಿ ಸಮಿತಿ ಅಥವಾ ಪದಾಧಿಕಾರಿಗಳಾಗಲು ಯಾವುದೇ ನಿರ್ಬಂಧವಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ದೇಶದ ವಿವಿಧ ವಕೀಲರ ಸಂಘಗಳ ಪದಾಧಿಕಾರಿಗಳು ಮತ್ತು ಅಧ್ಯಕ್ಷರ ಹುದ್ದೆಗೆ ರಾಜಕೀಯ ನಾಯಕರು ಮತ್ತು ಸದಸ್ಯ ಆಯ್ಕೆಗೆ ನಿರ್ಬಂಧ ಹೇರಬೇಕು ಎಂದು ಕೋರಿ ಅರ್ಜಿಸಲ್ಲಿಸಲಾಗಿತ್ತು. ರಾಜಕೀಯ ಪಕ್ಷಗಳ ಸದಸ್ಯರಾಗಿರುವ ವ್ಯಕ್ತಿಗಳು ಅಥವಾ ನಾಯಕರು ವಕೀಲರ ಸಂಘಗಳು ಮತ್ತು ಬಾರ್ ಕೌನ್ಸಿಲ್ಗಳ ಪದಾಧಿಕಾರಿಗಳಾಗಬಾರದು ಎಂದು ನಿರ್ದೇಶನ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ಮುಂದೆ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರಿದ್ದ ವಿಭಾಗೀಯ ಪೀಠ, ರಾಜಕೀಯ ಸಿದ್ಧಾಂತಗಳನ್ನು ಹೊಂದಿರುವ ವ್ಯಕ್ತಿಗಳು ವಕೀಲರ ಸಂಘಗಳಲ್ಲಿ ಕಾರ್ಯಕಾರಿ ಸಮಿತಿ ಅಥವಾ ಪದಾಧಿಕಾರಿಗಳಾಗಲು ಯಾವುದೇ ನಿರ್ಬಂಧವಿಲ್ಲ. ಅವರು ಆ ಸ್ಥಾನಕ್ಕೆ ಆಯ್ಕೆಯಾಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿದೆ.

“ವಕೀಲರ ಸಂಘದ ಪದಾಧಿಕಾರಿಯೊಬ್ಬರು ರಾಜಕೀಯ ಸಿದ್ಧಾಂತವನ್ನು ಹೊಂದಿದ್ದರೆ, ಅದರಲ್ಲಿ ತಪ್ಪೇನಿದೆ? ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್ಬಿಎ) ಅಧ್ಯಕ್ಷರಾಗಿ ಕಪಿಲ್ ಸಿಬಲ್ ಅವರನ್ನು ಪದಚ್ಯುತಗೊಳಿಸಲು ನೀವು ಬಯಸುತ್ತೀರಾ?. ಅದೇ ರೀತಿ, ನೀವು ಮನನ್ ಕುಮಾರ್ ಮಿಶ್ರಾ ಅವರನ್ನು ಬಾರ್ ಕೌನ್ಸಿಲ್ ಅಧ್ಯಕ್ಷ ಸ್ಥಾನದಿಂದ ಹೊರಹಾಕಲು ಬಯಸುತ್ತೀರಿ. ಎಂದು ಅರ್ಜಿದಾರರನ್ನು ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಶ್ನಿಸಿದರು.

ರಾಮ್ ಜೇಠಲಾನಿ ಅವರು ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾಗಲೂ ಸಹ ಸೇವೆ ಸಲ್ಲಿಸಿದ ಉದಾಹರಣೆಯನ್ನು ನ್ಯಾಯಮೂರ್ತಿ ಸೂರ್ಯ ಕಾಂತ್ ಸ್ಮರಿಸಿದರು.

ರಾಜಕೀಯ ಸಿದ್ಧಾಂತಗಳನ್ನು ಹೊಂದಿರುವ ವ್ಯಕ್ತಿಗಳು ಚುನಾಯಿತ ನಾಯಕರಾದರೆ ವಕೀಲರ ಸಂಘಗಳ ಸ್ವಾತಂತ್ರಕ್ಕೆ ಧಕ್ಕೆಯಾಗುತ್ತದೆ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post ವಕೀಲರ ಸಂಘದಲ್ಲಿ ರಾಜಕೀಯ ನಾಯಕರ ಆಯ್ಕೆಗೆ ನಿರ್ಬಂಧ ಕೋರಿ ಅರ್ಜಿ: ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ appeared first on Law Guide Kannada.

]]>