Video Conferance Archives - Law Guide Kannada https://www.lawguidekannada.com/tag/video-conferance/ Online Guide Thu, 10 Oct 2024 09:21:11 +0000 en-US hourly 1 https://wordpress.org/?v=6.9.4 http://www.lawguidekannada.com/wp-content/uploads/2022/09/cropped-Logo_512-32x32.jpg Video Conferance Archives - Law Guide Kannada https://www.lawguidekannada.com/tag/video-conferance/ 32 32 AC ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಡೆಡ್ ಲೈನ್ ಫಿಕ್ಸ್ http://www.lawguidekannada.com/fix-dead-line-for-disposal-of-pending-cases-in-ac-courts/ Thu, 10 Oct 2024 09:11:19 +0000 http://www.lawguidekannada.com/?p=879 ಬೆಂಗಳೂರು: ‘ ಎಸಿ(ಉಪವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಗೊಳಿಸಲು ಕಂದಾಯ ಸಚಿವ ಕೃಷ್ಣಭೈರೇಗೌಡ ಡೆಡ್ ಲೈನ್ ಫಿಕ್ಸ್ ಮಾಡಿದ್ದಾರೆ....

The post AC ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಡೆಡ್ ಲೈನ್ ಫಿಕ್ಸ್ appeared first on Law Guide Kannada.

]]>
ಬೆಂಗಳೂರು: ‘ ಎಸಿ(ಉಪವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಗೊಳಿಸಲು ಕಂದಾಯ ಸಚಿವ ಕೃಷ್ಣಭೈರೇಗೌಡ ಡೆಡ್ ಲೈನ್ ಫಿಕ್ಸ್ ಮಾಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಎಸಿ ಕೋರ್ಟ್ ಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಚರ್ಚಿಸಿದರು.

ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಕಳೆದ ಒಂದು ವರ್ಷದಿಂದ ಎಸಿ (ಉಪ ವಿಭಾಗಾಧಿಕಾರಿ) ನ್ಯಾಯಾಲಯಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುತ್ತಿದೆ. ಬಾಕಿ ಪ್ರಕರಣಗಳನ್ನೂ ಮುಂದಿನ ಆರು ತಿಂಗಳಲ್ಲಿ ವಿಲೇವಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಎಸಿ ಕೋರ್ಟ್ ನಲ್ಲಿರುವ ತಕರಾರು ಪ್ರಕರಣಗಳನ್ನು ಆರು ತಿಂಗಳ ಒಳಗೆ ವಿಲೇವಾರಿಗೊಳಿಸಬೇಕು ಎಂಬ ಕಾನೂನು ಇದೆ. ಆದರೆ, ನಾನು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಪ್ರಗತಿ ಪರಿಶೀಲನೆ ನಡೆಸಿದಾಗ, ಐದು ವರ್ಷದ ಹಳೆಯ ಪ್ರಕರಣಗಳೂ ಇತ್ಯರ್ಥಗೊಳ್ಳದೆ ಬಾಕಿ ಉಳಿದಿರುವುದು ಗಮನಕ್ಕೆ ಬಂದಿತ್ತು. ರೈತರು ಇದರ ನೇರ ಪರಿಣಾಮ ಅನುಭವಿಸಬೇಕಿತ್ತು. ಇದೇ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಅಭಿಯಾನದ ಮಾದರಿಯಲ್ಲಿ ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಇತ್ಯರ್ಥಕ್ಕೆ ವೇಗ ನೀಡಲಾಗಿದೆ. ಕಳೆದ ವರ್ಷ ನಾನು ಕಂದಾಯ ಇಲಾಖೆ ಸಚಿವನಾಗಿ ಜವಾಬ್ದಾರಿ ವಹಿಸಿಕೊಂಡ ಸಂದರ್ಭದಲ್ಲಿ ಎಸಿ ನ್ಯಾಯಾಲಯಗಳಲ್ಲಿ 73,682 ತಕರಾರು ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ 33,207 ಪ್ರಕರಣಗಳನ್ನು ಕೇವಲ ಒಂದು ವರ್ಷದ ಅವಧಿಯಲ್ಲಿ ಇತ್ಯರ್ಥಗೊಳಿಸಿರುವುದು ಉತ್ತಮ ಬೆಳವಣಿಗೆ. ಈ ಮೂಲಕ ರೈತರು -ಸಾರ್ವಜನಿಕರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದಕ್ಕೆ ಬ್ರೇಕ್ ಹಾಕಿರುವುದು, ಹಲವು ರೈತರಿಗೆ ನ್ಯಾಯ ಒದಗಿಸಿ ನೆಮ್ಮದಿ ನೀಡಿರುವುದು ಸಾರ್ಥಕದ ಕೆಲಸ” ಎಂದು ಶ್ಲಾಘಿಸಿದರು.

ಎಸಿ ನ್ಯಾಯಾಲಯಗಳಲ್ಲಿ ಇನ್ನೂ 40 ಸಾವಿರ ತಕರಾರು ಪ್ರಕರಣಗಳು ಇನ್ನೂ ಬಾಕಿ ಇವೆ. ಮುಂದಿನ ಆರು ತಿಂಗಳಲ್ಲಿ ಈ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು. ಹಲವು ಅಧಿಕಾರಿಗಳು ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲವರು ಇನ್ನೂ ಟ್ರ್ಯಾಕ್ ಗೆ ಬಂದಿಲ್ಲ. ಎಲ್ಲಾ ಅಧಿಕಾರಿಗಳು ಒಟ್ಟಾಗಿ ಕೈಜೋಡಿಸಿದರೆ ಬಾಕಿ ಪ್ರಕರಣಗಳಿಗೂ ಮುಕ್ತಿ ನೀಡುವುದು, ರೈತರಿಗೆ ನ್ಯಾಯ ಒದಗಿಸುವುದು ಕಷ್ಟದ ಮಾತಲ್ಲ” ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

“ಕಳೆದ ಒಂದು ವರ್ಷದಲ್ಲಿ ಒಂಬತ್ತು ಬಾರಿ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗಿದೆ. ಮುಂದಿನ ತಿಂಗಳ ಮೊದಲ ವಾರವೂ ಮತ್ತೊಂದು ಸಭೆ ನಡೆಸಲಾಗುವುದು. ಆ ವೇಳೆಗೆ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಎಷ್ಟು ಪ್ರಕರಣಗಳನ್ನು ವಿಲೇಗೊಳಿಸಿದ್ದೀರಿ? ಎಂದು ಪ್ರಗತಿ ಪರಿಶೀಲನೆ ನಡೆಸಲಾಗುವುದು. ಹೀಗಾಗಿ ತಮ್ಮ ಕೆಲಸಗಳಿಗೆ ಮತ್ತಷ್ಟು ವೇಗ ನೀಡಿ” ಎಂದು ತಾಕೀತು ಮಾಡಿದರು.
ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ಕೋರ್ಟ್ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೈತರಿಗೆ ಶೀಘ್ರ ನ್ಯಾಯ ಒದಗಿಸುವ ಸಲುವಾಗಿ, ರೆಗ್ಯುಲರ್ ಕೋರ್ಟ್ ಗಳ ಜೊತೆ ತುಮಕೂರು ಮಂಡ್ಯ ಮೈಸೂರು ರಾಮನಗರ ಬೆಂಗಳೂರು ಗ್ರಾಮಾಂತರ, ಕುಂದಾಪುರ ಸೇರಿ 11 ಜಿಲ್ಲೆಗಳಲ್ಲಿ 20ಕ್ಕೂ ಅಧಿಕ ವಿಶೇಷ ನ್ಯಾಯಾಲಯಗಳಿಗೆ ಚಾಲನೆ ನೀಡಲಾಗಿದೆ. ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post AC ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಡೆಡ್ ಲೈನ್ ಫಿಕ್ಸ್ appeared first on Law Guide Kannada.

]]>