19/05/2025

Law Guide Kannada

Online Guide

ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ – ಅಭಿಯೋಜನಾ ಇಲಾಖೆ ಪ್ರಕಟಣೆ

ರಾಜ್ಯದ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಅಭಿಯೋಗ ಮತ್ತು ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಇಲಾಖೆಯಲ್ಲಿ 205 ಸಹಾಯಕ ಸರ್ಕಾರಿ ಅಭಿಯೋಜಕ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ಅಡಿಯಲ್ಲಿ ಪ್ರಸ್ತುತ 143 ಸಹಾಕರ ಸರ್ಕಾರಿ ಅಭಿಯೋಜಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡಲಾಗುತ್ತಿದೆ.

ಉಳಿದ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜನಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ನೇಮಕಾತಿ ಮಾಡಲು ವಿಳಂಬ ಆಗುತ್ತಿರುವುದರಿಂದ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 303 ಗುತ್ತಿಗೆ ಸಹಾಯಕ ಸರ್ಕಾರಿ ಅಭಿಯೋಜನಕರುಗಳ ಕಾರ್ಯನಿರ್ವಣೆ ತೃಪ್ತಿಕರವಾಗಿ ಇಲ್ಲದೆ ಇರುವುದರಿಂದ ಹಾಗೂ ಇದರಲ್ಲಿ ಕೆಲವರ ವಿರುದ್ಧ ದೂರುಗಳು ಕೇಳಿ ಬಂದಿರುವುದರಿಂದ ಈ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಅರ್ಹ ವಕೀಲರಿಂದ ಖಾಲಿ ಇರುವ ಹುದ್ದೆಗಳಿಗೆ ಜಿಲ್ಲಾವಾರು ಅರ್ಜಿಗಳನ್ನು ಆಹ್ವಾನಿಸಿ 303 ಸಹಾಯಕ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳನ್ನು ಒಳಗೊಂಡಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವವರೆಗೆ ದೈನಂದಿನ ಕೆಲಸ ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ.

ಈ ನೇಮಕಾತಿಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ. ಎಲ್ಲ ಪ್ರಧಾನ ಜಿಲ್ಲಾ ನ್ಯಾಯಾಲಯಗಳ ಸರ್ಕಾರಿ ಅಭಿಯೋಜಕರನ್ನು ಸದಸ್ಯ ಕಾರ್ಯದರ್ಶಿ ಎಂದು ನೇಮಕ ಮಾಡಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಅಳವಡಿಸಿ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

ವರದಿ : ಲಾಗೈಡ್

Copyright © All rights reserved. | Newsphere by AF themes.