ಹೈಕೋರ್ಟ್ ಗೆ ಡಿ.30ರ ವರೆಗೆ ರಜೆ

ಬೆಂಗಳೂರು : ರಾಜ್ಯ ಹೈಕೋರ್ಟ್‌ಗೆ ಡಿಸೆಂಬರ್ 22 ರಿಂದ 30 ರವರೆಗೆ ಚಳಿಗಾಲದ ರಜೆಯನ್ನು ಘೋಷಿಸಲಾಗಿದೆ.
ಹೈಕೋರ್ಟ್‌ನ ಮೂರು ನ್ಯಾಯಾಲಯಗಳಲ್ಲಿ ಡಿಸೆಂಬರ್ 26 ಮತ್ತು 28 ರಂದು ರಜಾಕಾಲೀನ ಪೀಠಗಳು ತುರ್ತು ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. ಮಧ್ಯಂತರ ಆದೇಶ ಅಗತ್ಯವಿರುವ ತಡೆಯಾಜ್ಞೆ, ಮಧ್ಯಂತರ ನಿರ್ದೇಶನ, ತಾತ್ಕಾಲಿಕ ಪ್ರತಿಬಂಧಕಾದೇಶ ಅರ್ಜಿಗಳನ್ನು ಮಾತ್ರ ರಜಾಕಾಲೀನ ಪೀಠಗಳಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಂಗ ವಿಭಾಗದ ರಿಜಿಸ್ಟ್ರಾರ್ ಎಂ.ಚಂದ್ರಶೇಖರ್ ರೆಡ್ಡಿ ಅವರು ತಿಳಿಸಿದ್ದಾರೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ