06/03/2026

Law Guide Kannada

Online Guide

ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಮಹಿಳೆಯರಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ನಿರ್ದೇಶನ

ನವದೆಹಲಿ: ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಅಧಿಕಾರಿ, ಪದಾಧಿಕಾರಿ ಸ್ಥಾನಗಳಿಗೂ ಅನ್ವಯವಾಗುವಂತೆ ದೇಶದ ಪ್ರತಿಯೊಂದು ರಾಜ್ಯ ವಕೀಲರ ಪರಿಷತ್ ನಲ್ಲಿ ಮಹಿಳೆಯರಿಗೆ ಶೇ 30ರಷ್ಟು ಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಅಲ್ಲದೆ ಈ ನಿಟ್ಟಿನಲ್ಲಿ ಭಾರತೀಯ ವಕೀಲರ ಪರಿಷತ್ ಅಸ್ತಿತ್ವದಲ್ಲಿರುವ ನಿಯಮಗಳನ್ನು ಈ ಉದ್ದೇಶದಿಂದ ವ್ಯಾಖ್ಯಾನಿಸಿ ತಿದ್ದುಪಡಿ ಮಾಡಿರುವುದಾಗಿ ಅರ್ಥೈಸಿ ಜಾರಿಗೆ ತರಬೇಕು ಎಂದು ಸೂಚಿಸಿದೆ.

ದೇಶದ ವಕೀಲರ ಪರಿಷತ್ತುಗಳಲ್ಲಿ ಮಹಿಳೆಯರು ಮತ್ತು ಸಮಾಜದಂಚಿನಲ್ಲಿರುವ ಗುಂಪುಗಳಿಗೆ ಸಂಪೂರ್ಣ ಕಡಿಮೆ ಪ್ರಾತಿನಿಧ್ಯ ದೊರೆತಿದೆ ಎಂದು ಸುಪ್ರೀಂ ಕೋರ್ಟ್ ವಕೀಲರಾದ ಯೋಗಮಾಯ ಎಂ ಜಿ ಮತ್ತು ಶೆಹ್ಲಾ ಚೌಧರಿ ಸಲ್ಲಿಸಿದ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಈ ಆದೇಶ ನೀಡಲಾಗಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠವು ಈ ನಿರ್ದೇಶನ ನೀಡಿದ್ದು, ದೇಶದ ಪ್ರತಿಯೊಂದು ರಾಜ್ಯ ವಕೀಲರ ಪರಿಷತ್ನಲ್ಲಿ ಮಹಿಳೆಯರಿಗೆ ಶೇ 30ರಷ್ಟು ಮೀಸಲಾತಿ ದೊರೆಯಬೇಕು ಎಂದು ಗುರುವಾರ ತಿಳಿಸಿರುವ ಸುಪ್ರೀಂ ಕೋರ್ಟ್ ಈ ನಿಟ್ಟಿನಲ್ಲಿ ಭಾರತೀಯ ವಕೀಲರ ಪರಿಷತ್ ಅಸ್ತಿತ್ವದಲ್ಲಿರುವ ನಿಯಮಗಳನ್ನು ಈ ಉದ್ದೇಶದಿಂದ ವ್ಯಾಖ್ಯಾನಿಸಿ ತಿದ್ದುಪಡಿ ಮಾಡಿರುವುದಾಗಿ ಅರ್ಥೈಸಿ ಜಾರಿಗೆ ತರಬೇಕು ಎಂದು ಸೂಚಿಸಿದೆ

ಈ ಕ್ರಮ ಸಾಂವಿಧಾನಿಕ ಮೌಲ್ಯ ಹಾಗೂ ಲಿಂಗ ಸಮಾನತೆಗೆ ಸಂಬಂಧಿಸಿದ ಕಾನೂನು ಸುಧಾರಣೆಗೆ ಅನುಗುಣವಾಗಿದೆ. ಈ ಉದ್ದೇಶದಿಂದ ಭಾರತೀಯ ವಕೀಲರ ಪರಿಷತ್ತು ಅಸ್ತಿತ್ವದಲ್ಲಿ ಇರುವ ನಿಯಮಗಳನ್ನು ವ್ಯಾಖ್ಯಾನಿಸಿ ತಿದ್ದುಪಡಿ ಮಾಡಿದೆ. ಇದನ್ನು ಅರ್ಥೈಸಿಕೊಂಡು ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ನ್ಯಾಯಪೀಠ ಹೇಳಿದೆ.

ದೇಶದ ವಕೀಲರ ಪರಿಷತ್ತುಗಳಲ್ಲಿ ಮಹಿಳೆಯರು ಮತ್ತು ಸಮಾಜದಂಚಿನಲ್ಲಿ ಇರುವ ಗುಂಪುಗಳಿಗೆ ಸಂಪೂರ್ಣ ಕಡಿಮೆ ಪ್ರಾತಿನಿಧ್ಯ ದೊರೆತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.