20/05/2025

Law Guide Kannada

Online Guide

ನ್ಯಾ. ವರ್ಮಾ ಪ್ರಕರಣದ ಬಳಿಕ ಎಚ್ಚೆತ್ತ ಸುಪ್ರೀಂ: ನ್ಯಾಯಮೂರ್ತಿಗಳ ಆಸ್ತಿ ವಿವರ ಬಹಿರಂಗಕ್ಕೆ ನಿರ್ಧಾರ

ನವದೆಹಲಿ: ನ್ಯಾಯಾಧೀಶ ಯಶವಂತ್ ವರ್ಮಾ ಅವರ ಪ್ರಕರಣದ ಬಳಿಕ ಎಚ್ಚೆತ್ತ ಸುಪ್ರೀಂಕೋರ್ಟ್ ನ್ಯಾಯಾಂಗದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ನ್ಯಾಯಮೂರ್ತಿಗಳಿಂದ ಆಸ್ತಿ ವಿವರ ಬಹಿರಂಗಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ನ್ಯಾಯಾಂಗದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನ್ಯಾಯಮೂರ್ತಿಗಳಿಂದ ಆಸ್ತಿ ವಿವರ ಬಹಿರಂಗ ಪಡಿಸಲು ನಿರ್ಧರಿಸಿದ್ದಾರೆ. ನ್ಯಾಯಾಂಗದ ಪಾರದರ್ಶಕತೆ ಮತ್ತು ನಂಬಿಕೆಯನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲು ಮತ್ತು ನ್ಯಾಯಾಲಯದ ವೆಬ್ಸೈಟ್ಗೆ ಅಪ್ಲೋಡ್ ಮಾಡಲು ಒಪ್ಪಿಕೊಂಡಿದ್ದಾರೆ. ಸಾರ್ವಜನಿಕರಲ್ಲಿ ವಿಶ್ವಾಸವನ್ನು ಹೆಚ್ಚಿಸುವ ಈ ನಿರ್ಧಾರ ಕೈಗೊಳ್ಳಲಾಗಿದೆ ಈ ವಿವರಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲಾಗುವುದು ಎಂದು 30 ನ್ಯಾಯಮೂರ್ತಿಗಳು ಹೇಳಿದ್ದು. ಇದೊಂದು ಐತಿಹಾಸಿಕ ಹೆಜ್ಜೆ ಎಂದು ಹೇಳಲಾಗಿದೆ.

ನ್ಯಾಯಮೂರ್ತಿಗಳ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಸುಪ್ರೀಂ ಕೋರ್ಟ್ ಅಧಿಕೃತ ವೆಬ್ಸೈಟ್ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ. ಆಸ್ತಿ ವಿವರ ಸ್ವಯಂಪ್ರೇರಿತವಾಗಿದ್ದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಏ.1 ರಂದು ನ್ಯಾಯಾಲಯದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಭೆಯಲ್ಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿ 30 ನ್ಯಾಯಮೂರ್ತಿಗಳು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ಡಿಕ್ಲರೇಷನ್ ಸಲ್ಲಿಸಿದ್ದಾರೆ. ಈ ವಿವರಗಳನ್ನು ಸುಪ್ರೀಂ ಕೋರ್ಟ್ನ ಅಧಿಕೃತ ವೆಬ್ಸೈಟ್ನಲ್ಲಿಯೂ ಅಪ್ಲೋಡ್ ಮಾಡಲಾಗುತ್ತದೆ. ನ್ಯಾಯಾಧೀಶರ ಆಸ್ತಿ ಘೋಷಣೆಗಳನ್ನು ಪ್ರಕಟಿಸಲು ನಿರ್ದಿಷ್ಟ ವಿಧಾನಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುತ್ತದೆ ಎಂದು ವರದಿಯಾಗಿದೆ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಇತ್ತೀಚೆಗೆ ಅಗ್ನಿ ಅವಘಡ ಸಂಭವಿಸಿತ್ತು. ಅವಘಡದ ನಂತರ ಸುಟ್ಟಿದ್ದ ಕಂತೆ ಕಂತೆ ನಗದು ಹಣ ಪತ್ತೆಯಾಗಿತ್ತು ಎನ್ನಲಾಗಿತ್ತು. ಈ ಘಟನೆಯ ಬೆನ್ನಲ್ಲೇ ನ್ಯಾಯಾಧೀಶರ ಆಸ್ತಿ ಘೋಷಣೆ ಮುನ್ನೆಲೆಗೆ ಬಂದಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.