ನಟಿ ಸಂಜನಾ ಗಲ್ರಾನಿಗೆ ವಂಚನೆ: ಉದ್ಯಮಿಗೆ ಜೈಲು ಶಿಕ್ಷೆ ಮತ್ತು 61.ಲಕ್ಷ ರೂ. ಹಣ ವಾಪಸ್ ನೀಡಲು ಕೋರ್ಟ್ ಆದೇಶ

ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರಿಂದ ಹಣ ಪಡೆದು ವಂಚನೆ ಮಾಡಿದ್ದ ಉದ್ಯಮಿ ರಾಹುಲ್ ತೋನ್ಸೆಗೆ 6 ತಿಂಗಳ ಕಾಲ ಜೈಲು ಶಿಕ್ಷೆ ಮತ್ತು 61.ಲಕ್ಷ ರೂ. ಹಣ ವಾಪಸ್ ನೀಡುವಂತೆ ಬೆಂಗಳೂರಿನ ಮೂರನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ನೀಡಿದೆ.
ಸಂಜನಾ ಗಲ್ರಾನಿ ಅವರ ಸ್ನೇಹಿತ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಮೂರನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಕೋರ್ಟ್ ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ.
ದಂಡದ ಮೊತ್ತದಲ್ಲಿ 10 ಸಾವಿರ ಕೋರ್ಟ್ ಶುಲ್ಕ ಕಡಿತ ಮಾಡಿ ಉಳಿದ ಹಣ ಸಂಜನಾಗೆ ನೀಡಬೇಕು. ನಿಗದಿತ ಸಮಯದಲ್ಲಿ ದಂಡ ಪಾವತಿಸಿದರೆ ಆರು ತಿಂಗಳ ಶಿಕ್ಷೆ ಮಾಫಿ ಮಾಡಲಾಗುವುದು. ಒಂದು ವೇಳೆ ಪರಿಹಾರ ಮೊತ್ತ ನೀಡದೆ ಜೈಲು ಶಿಕ್ಷೆ ಅನುಭವಿಸಿದರೂ ದೂರುದಾರೆಗೆ ಪರಿಹಾರ ಹಿಂದಿರುಗಿಸುವ ಹೊಣೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಏನಿದು ಪ್ರಕರಣ…
2018-19ರಲ್ಲಿ ರಿಯಲ್ ಎಸ್ಟೇಟ್ ಹೂಡಿಕೆಯ ನೆಪದಲ್ಲಿ ಸಂಜನಾ ತನ್ನ ಸ್ನೇಹಿತನೂ ಆಗಿದ್ದ ರಾಹುಲ್ ತೋನ್ಸೆಗೆ 45 ಲಕ್ಷ ರೂ.ಗಳನ್ನು ನೀಡಿದ್ದರು. ಈ ಹಣವನ್ನು ಪಡೆದಿದ್ದ ರಾಹುಲ್ ಹಣ ನೀಡದೆ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿ 2021ರಲ್ಲಿ ನಟಿ ಸಂಜನಾ ಇಂದಿರಾನಗರದಲ್ಲಿ ಪ್ರಕರಣ ದಾಖಲಿಸಿದ್ದರು. ಕೋರ್ಟ್ ಸೂಚನೆ ಮೇರೆಗೆ ರಾಹುಲ್ ತೋನ್ಸೆ ವಿರುದ್ಧ ನ್ಯಾಯಾಲಯದಲ್ಲಿ ವಂಚನೆ ಮತ್ತು ಚೆಕ್ ಅಮಾನ್ಯ ಪ್ರಕರಣವನ್ನೂ ದಾಖಲಿಸಿದ್ದರು. ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ’ ಸಂಜನಾ ಅವರಗಿ ಪಾವತಿ ಮಾಡಬೇಕಾದ ಹಣಕ್ಕ ಬಡ್ಡಿ ಸೇರಿಸಿ, 61.40 ಲಕ್ಷ ವಾಪಸ್ ‘ ನೀಡಲು ಆದೇಶ ನೀಡಿದೆ.
ನಟಿ ಸಂಜನಾ ಗೆ 61.40 ಲಕ್ಷ ವಾಪಸ್ ನೀಡಲು ವಿಫಲರಾದರೆ ಅಪರಾಧಿ ರಾಹುಲ್ ತೋನ್ಸೆ ಆರು ತಿಂಗಳ ಸಾದಾ ಜೈಲು ಶಿಕ್ಷೆ ಪೂರೈಸಬೇಕು. ಒಂದು ವೇಳೆ ಪರಿಹಾರ ಮೊತ್ತ ನೀಡದೇ ಜೈಲು ಶಿಕ್ಷೆ ಅನುಭವಿಸಿದರೆ ಪರಿಹಾರ ಹಿಂತಿರುಗಿಸುವ ಬಾಧ್ಯತೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತೀರ್ಪು ಹೇಳಿದೆ. ಅಪರಾಧಿ ರಾಹುಲ್ ತೋನ್ಸೆ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಲುಕ್ಔಟ್ ನೋಟೀಸ್ ಜಾರಿಗೊಳಿಸಿದ್ದಾರೆ. ಆತ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ