19/05/2025

Law Guide Kannada

Online Guide

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಮದರಸಾ ಶಿಕ್ಷಕನಿಗೆ 187 ವರ್ಷ ಜೈಲು ಶಿಕ್ಷೆ ಪ್ರಕಟ

ಕಣ್ಣೂರು: ದೇಶದಲ್ಲಿ ಮಹಿಳೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚುತ್ತಲೇ ಇದ್ದು ಇಲ್ಲೊಬ್ಬ ಮದರಸಾ ಶಿಕ್ಷಕ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿ ಇದೀಗ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.

ಹೌದು, ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಎರಡು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ 41 ವರ್ಷದ ಮದರಸಾ ಶಿಕ್ಷಕನಿಗೆ ಪೋಕ್ಸ್ ನ್ಯಾಯಾಲಯದ 187 ವರ್ಷ ಜೈಲು ಶಿಕ್ಷೆ ವಿಧಿಸಿದ ತೀರ್ಪು ಪ್ರಕಟಿಸಿದೆ.

41 ವರ್ಷದ ಮಹಮ್ಮದ್ ರಫಿ ಎಂಬಾತನೇ ಜೈಲು ಶಿಕ್ಷೆಗೊಳಗಾದ ಅಪರಾಧಿ. ಕೇರಳದ ಕಣ್ಣೂರು ಜಿಲ್ಲೆಯ ತಲಿಪರಂಬ ಪೋಕೋ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.

ಮಹಮ್ಮದ್ ರಫಿ ಆಲಕೋಡ್ ಪಂಚಾಯತ್ ವ್ಯಾಪ್ತಿಯಲ್ಲಿ ಇದ್ದ ಮದರಸಾದಲ್ಲಿ ಶಿಕ್ಷಕನಾಗಿದ್ದ. ಈ ನಡುವೆ ಕೋವಿಡ್ 19ರ ಲಾಕ್ ಡೌನ್ ಸಂದರ್ಭದಲ್ಲಿ 16 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಎರಡು ವರ್ಷಗಳ ವರೆಗೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಈತನಿಗೆ ಪೋಕೋ ವಿಶೇಷ ನ್ಯಾಯಾಲಯ 187 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.