ರಾಜ್ಯ ಸಿವಿಲ್ ಸೇವೆ ಹುದ್ದೆ ನೇಮಕಾತಿ ಹೊಸ ಅಧಿಸೂಚನೆ ರದ್ದುಗೊಳಿಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿ ಹೊಸದಾಗಿ ಅಧಿಸೂಚನೆ ಹೊರಡಿಸಿದ್ದರೆ ಅದನ್ನ ರದ್ದುಪಡಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗೆ ನೇಮಕಾತಿ ಮಾಡುವ ನಿಟ್ಟಿನಲ್ಲಿ 28-10-2024ರ ನಂತರ ನೇರ ನೇಮಕಾತಿ ಯಾ ಬ್ಯಾಕ್ಲಾಕ್ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಹೊರಡಿಸಿದ್ದಲ್ಲಿ ಅದನ್ನು ತಕ್ಷಣವೇ ರದ್ದುಪಡಿಸಲು ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು 2024ರ ನವೆಂಬರ್ 25 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಸೂಚಿಸಲಾಗಿತ್ತು. ಆದರೂ ಕೂಡ ಕೆಲವು ನೇಮಕಾತಿ ಪ್ರಾಧಿಕಾರಿಗಳು ಈ ಸೂಚನೆ ಉಲ್ಲಂಘಿಸಿ ನೇರ ನೇಮಕಾರಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಹೀಗಾಗಿ 2024ರ ನವೆಂಬರ್ 28ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಸರ್ಕಾರ ಸೂಚಿಸಿದೆ.
ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು ದಿನಾಂಕ 11-04-2025ರಂದು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಎಲ್ಲ ಸಕ್ಷಮ ನೇಮಕಾತಿ ಪ್ರಾಧಿಕಾರಗಳಿಗೆ ಅನ್ವಯವಾಗುವಂತೆ ಸೂಚನೆ ಹೊರಡಿಸಲಾಗಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು. ಅದರ ಪ್ರಕಾರ, 28-10-2024ರಂದು ಅಥವಾ ಆ ನಂತರ ನೇರ ನೇಮಕಾತಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಹೊಸ ಅಧಿಸೂಚನೆ ಹೊರಡಿಸಿದ್ದರೆ ಅದನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಬೇಕು ಎಂದು ಸಕ್ಷಮ ನೇಮಕಾತಿ ಪ್ರಾಧಿಕಾರಗಳಿಗೆ ಆದೇಶಿಸಲಾಗಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ