20/05/2025

Law Guide Kannada

Online Guide

ಪೊಲೀಸರಿಗೆ 50 ಸಾವಿರ ರೂ .ದಂಡ ವಿಧಿಸಿ ಬಿಸಿ ಮುಟ್ಟಿಸಿದ ಸುಪ್ರೀಂಕೋರ್ಟ್: ಕಾರಣ ಏನು..?

ನವದೆಹಲಿ: ಸಿವಿಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಕೇಸ್ ದಾಖಲಿಸಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸರಿಗೆ 50 ಸಾವಿರ ರೂ. ದಂಡ ವಿಧಿಸಿ ಸುಪ್ರೀಂಕೋರ್ಟ್ ಬಿಸಿಮುಟ್ಟಿಸಿದೆ.

ಸಿವಿಲ್ ಪ್ರಕರಣದಲ್ಲಿ ಅನಗತ್ಯವಾಗಿ ಕ್ರಿಮಿನಲ್ ಕೇಸ್ ದಾಖಲಿಸಿದ ಉತ್ತರ ಪ್ರದೇಶ ಪೊಲೀಸರಿಗೆ ಸುಪ್ರೀಂ ಕೋರ್ಟ್ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಸಿವಿಲ್ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ತಪ್ಪು. ಪೊಲೀಸರ ಈ ನಡೆ ಕಾನೂನುಬಾಹಿರ ಮತ್ತು ಸ್ವೀಕಾರಾರ್ಹವಲ್ಲ ಎಂದು ನ್ಯಾಯಪೀಠ ಉತ್ತರ ಪ್ರದೇಶ ಪೊಲೀಸರ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಸಿವಿಲ್ ಪ್ರಕರಣಗಳನ್ನ ಕ್ರಿಮಿನಲ್ ಪ್ರಕರಣಗಳನ್ನಾಗಿ ಪರಿವರ್ತಿಸುತ್ತಿರುವುದನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗುತ್ತಲೇ ಇವೆ ಎಂದು ನ್ಯಾಯಪೀಠ ಕಳವಳ ವ್ಯಕ್ತಪಡಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.