23/04/2026

Law Guide Kannada

Online Guide

ಸುಪ್ರೀಂಕೋರ್ಟ್ ಕೊಲಿಜಿಯಂಗೆ ನ್ಯಾ. ಬಿ.ವಿ ನಾಗರತ್ನ ಸೇರ್ಪಡೆ

ನವದೆಹಲಿ: ಸುಪ್ರೀಂಕೋರ್ಟ್ ಕೊಲಿಜಿಯಂನ ಹಾಲಿ ಸದಸ್ಯರಲ್ಲಿ ಒಬ್ಬರಾದ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಮುಂದಿನ ಕೆಲ ವರ್ಷಗಳಲ್ಲಿ ಸುಪ್ರೀಂ ಕೋರ್ಟ್ ನ ಪ್ರಪ್ರಥಮ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿರುವ ನ್ಯಾ. ಬಿ ವಿ ನಾಗರತ್ನ ಅವರು ಈಗ ಕೊಲಿಜಿಯಂಗೆ ಸೇರ್ಪಡೆಯಾಗಿದ್ದಾರೆ.

ಸುಪ್ರೀಂಕೋರ್ಟ್ ನ ಏಕೈಕ ಮಹಿಳಾ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಈಗ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಕೊಲಿಜಿಯಂನ ಸದಸ್ಯರಾಗಿದ್ದಾರೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ನಿವೃತ್ತರಾದ ನಂತರ ನಾಗರತ್ನ ಅವರು ಕೊಲಿಜಿಯಂನ ಭಾಗವಾದರು.

ಸಿಜೆಐ ಗವಾಯಿ ಅವರ ಅಧಿಕಾರಾವಧಿ ಪ್ರಾರಂಭವಾದಾಗ, ಕೊಲಿಜಿಯಂನಲ್ಲಿ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ , ಅಭಯ್ ಎಸ್ ಓಕಾ, ವಿಕ್ರಮ್ ನಾಥ್ ಮತ್ತು ಜೆ.ಕೆ ಮಹೇಶ್ವರಿ ಇದ್ದರು. ನ್ಯಾಯಮೂರ್ತಿ ಓಕಾ ಅವರು ಹುದ್ದೆಯಿಂದ ನಿವೃತ್ತರಾಗಿದ್ದು, ಕೊಲಿಜಿಯಂನ ಒಂದು ಸ್ಥಾನ ತೆರವಾಗಿತ್ತು. ಇದೀಗ ಆ ಸ್ಥಾನಕ್ಕೆ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಸೇರ್ಪಡೆಯಾಗಿದ್ದಾರೆ.

ಹಿರಿಯ ನ್ಯಾಯಮೂರ್ತಿಗಳ ಮಂಡಳಿಯು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ನ ನ್ಯಾಯಮೂರ್ತಿಗಳ ನೇಮಕಾತಿಗೆ ಹೆಸರುಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ. ನ್ಯಾಯಮೂರ್ತಿಗಳ ವರ್ಗಾವಣೆಯನ್ನೂ ನಿರ್ಧರಿಸಲಿದೆ. ನ್ಯಾಯಮೂರ್ತಿ ಅಭಯ್ ಎಸ್. ಓಕಾ ಅವರ ನಿವೃತ್ತಿಯಿಂದಾಗಿ ಸುಪ್ರೀಂಕೋರ್ಟ್ನಲ್ಲಿ ಮೂವರು ನ್ಯಾಯಮೂರ್ತಿಗಳ ಸ್ಥಾನ ಖಾಲಿ ಇರಲಿದೆ.

ನ್ಯಾ. ಬಿ.ಬಿ ನಾಗರತ್ನ ಅವರ ಜೀವನ, ಸಾಧನೆ…
ಬಿ.ವಿ.ನಾಗರತ್ನ ಅವರು. ಕರ್ನಾಟಕದವರು. 1962ರ ಅಕ್ಟೋಬರ್ 30ರಂದು ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಜನಿಸಿದ ಬಿ.ವಿ.ನಾಗರತ್ನ ಅವರು, ಸುಪ್ರೀಂಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರ ಪುತ್ರಿ.

1984ರಲ್ಲಿ ದೆಹಲಿ ವಿಶ್ವವಿದ್ಯಾಲಯದ ಜೀಸಸ್ ಮತ್ತು ಮೇರಿ ಕಾಲೇಜಿನಲ್ಲಿ ಇತಿಹಾಸ ವಿಷಯದಲ್ಲಿ ಪದವಿ ಆನರ್ಸ್ ಪಡೆದಿದ್ದ ಬಿ.ವಿ.ನಾಗರತ್ನ ಅವರು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದ ಕಾನೂನು ಕೇಂದ್ರದಲ್ಲೇ ಎಲ್ಎಲ್ಬಿ ಮುಗಿಸಿದರು.

2008ರ ಫೆಬ್ರವರಿ 18ರಂದು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2010ರ ಫೆಬ್ರುವರಿ 17ರಂದು ಕಾಯಂ ನ್ಯಾಯಮೂರ್ತಿಯಾದರು. 2021ರ ಆಗಸ್ಟ್ 31ರಂದು ಬಿ.ವಿ.ನಾಗರತ್ನ ಅವರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡಲಾಗಿತ್ತು.

ನಾಗರತ್ನ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗುವ ಸರದಿಯಲ್ಲಿದ್ದಾರೆ. 2027ರ ಸೆಪ್ಟೆಂಬರ್ 23ರಂದು ದೇಶದ ಮೊದಲ ಮಹಿಳಾ ಸಿಜೆಐ ಆಗಿ ಬಿ.ವಿ.ನಾಗರತ್ನ ಅವರ ಕಾರ್ಯಭಾರ ಆರಂಭವಾಗಲಿದೆ. ಅವರ ಸೇವಾವಧಿ 2027ರ ಅಕ್ಟೋಬರ್ 29ರಂದು ಕೊನೆಗೊಳ್ಳಲಿದೆ.

ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರ ಪುತ್ರಿ. ಜನಿಸಿದ್ದು 30 ಅಕ್ಟೋಬರ್ 1962ರಲ್ಲಿ. 1987ರಲ್ಲಿ ವಕೀಲರಾಗಿ ಬೆಂಗಳೂರಿನಲ್ಲಿ ನೋಂದಣಿ ಮಾಡಿಸಿದರು. ಸಂವಿಧಾನ, ವಾಣಿಜ್ಯ, ವಿಮೆ ಮತ್ತು ಸೇವಾ ವಿಷಯಗಳ ಕ್ಷೇತ್ರದಲ್ಲಿ ಇವರು ಅಭ್ಯಾಸ (ಪ್ರಾಕ್ಟಿಸ್) ನಡೆಸಿದರು.

2008ರ ಫೆಬ್ರವರಿ 18ರಂದು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2010ರ ಫೆಬ್ರವರಿ 17ರಂದು ಖಾಯಂ ನ್ಯಾಯಮೂರ್ತಿಯಾದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.