ವಕೀಲರಿಗೆ ರಿಲೀಫ್: ಕರಿ ಕೋಟಿಗೆ ವಿನಾಯಿತಿ ಕೊಟ್ಟ ಹೈಕೋರ್ಟ್
ಬೆಂಗಳೂರು: ಬೇಸಿಗೆ ಕಾಲ ವಿಪರೀತ ಸೆಖೆ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪದಲ್ಲಿ ಭಾಗವಹಿಸುವ ವಕೀಲರಿಗೆ ಕರಿ ಕೋಟು ಕಡ್ಡಾಯ ಧರಿಸುವುದಕ್ಕೆ ವಿನಾಯಿತಿ ನೀಡುವ ಮೂಲಕ ವಕೀಲರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ಕೊಟ್ಟಿದೆ.
ಬೇಸಿಗೆ ಕಾಲ ಮುಗಿಯುವವರೆಗೆ, ಅಂದರೆ, ಮಾರ್ಚ್ 15 ರಿಂದ ಮೇ 31ರವರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೋರ್ಟ್ ಕಲಾಪದಲ್ಲಿ ಭಾಗವಹಿಸುವ ವಕೀಲರಿಗೆ ಕರಿ ಕೋಟು ಕಡ್ಡಾಯ ಧರಿಸುವುದಕ್ಕೆ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯದಲ್ಲಿ ಕಪ್ಪು ಕೋರ್ಟ್ ಧರಿಸುವುದರಿಂದ ವಕೀಲರಿಗೆ ವಿನಾಯಿತಿ ನೀಡುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಮತ್ತು ಕರ್ನಾಟಕ ವಕೀಲರ ಪರಿಷತ್ ಹೈಕೋರ್ಟ್ಗೆ ಮನವಿ ಪತ್ರ ಸಲ್ಲಿಸಿತ್ತು. ಹೀಗಾಗಿ ರಾಜ್ಯದ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.
ಆದರೆ, ಈ ವಿನಾಯ್ತಿ ಬಿಳಿ ಶರ್ಟ್ ಮತ್ತು ನೆಕ್ ಬ್ಯಾಂಡ್ ಧರಿಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಹವಾನಿಯಂತ್ರಿತ ವ್ಯವಸ್ಥೆ ಇಲ್ಲ. ಈಗಾಗಲೇ ಬಿಸಿಲಿನ ಪ್ರಮಾಣ ದಿನೇ ದಿನೇ ಏರುತ್ತಿದೆ. ಈ ಸಂದರ್ಭದಲ್ಲಿ ಬಿಳಿ ಬಟ್ಟೆ ಮೇಲೆ ಕಪ್ಪು ಕೋಟ್ ಮತ್ತು ಬ್ಯಾಂಡ್ ಹಾಕುವುದು ಕಷ್ಟ. ಹಾಗಾಗಿ ಕಪ್ಪು ಕೋಟ್ ಧರಿಸುವುದರಿಂದ ಬೇಸಿಗೆ ರಜಾಕಾಲ ಮುಗಿದು ನ್ಯಾಯಾಲಯಗಳು ಕೆಲಸ ಪುನಾರಂಭಿಸುವವರೆಗೆ ಈ ವಿನಾಯಿತಿ ಜಾರಿಯಲ್ಲಿ ಇರುತ್ತದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿ
