23/04/2026

Law Guide Kannada

Online Guide

ಪದವೀಧರರಿಗೆ ಗುಡ್ ನ್ಯೂಸ್: ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ: ವಿವರ ಹೀಗಿದೆ

ಬೆಂಗಳೂರು: ರಾಜ್ಯದ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಏಪ್ರಿಲ್ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಈ ಹುದ್ದೆಗೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ. ವಯೋಮಿತಿ ಅರ್ಹತೆ 18 ರಿಂದ 40 ವರ್ಷಗಳಾಗಿದ್ದು, ವಯೋಮಿತಿಯಲ್ಲಿ ನಿಯಮದಂತೆ ಸಡಿಲಿಕೆ ಇರಲಿದೆ. ಸರ್ಕಾರದ ನಿಯಮಾನುಸಾರ ಎಸ್ಸಿ/ಎಸ್ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

70 ಹುದ್ದೆಗಳ ಪೈಕಿ, ಆರ್ಪಿಸಿ ವಿಭಾಗಕ್ಕೆ 59 ಹುದ್ದೆಗಳು ಹಾಗೂ ಕೆಕೆಆರ್ ವಿಭಾಗಕ್ಕೆ 11 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಆಸಕ್ತರು ಏಪ್ರಿಲ್ 15ರೊಳಗೆ ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ವಿಧಾನ. ವೇತನದ ವಿವರ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ಪೂರ್ವಭಾವಿ, ಮುಖ್ಯ ಪರೀಕ್ಷೆ, ಸೈನೋಗ್ರಫಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕಾನೂನು ಪದವಿ, ವಿಜ್ಞಾನ, ಕಲೆ, ವಾಣಿಜ್ಯ, ಬಿಬಿಎ, ಕಂಪ್ಯೂಟರ್ ಅಪ್ಲಿಕೇಶನ್ ಅಥವಾ ಎಂಬಿಎ ಪದವಿಯನ್ನು ಪೂರ್ಣಗೊಳಿಸಿರಬೇಕು. ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ರೂ. 44,900 ರಿಂದ ರೂ. 1,42,400 ರೂ ವರೆಗೆ ವೇತನ ಇರಲಿದೆ.

ಹೆಚ್ಚಿನ ಮಾಹಿತಿಗಾಗಿ 161 ಕರ್ನಾಟಕ ಹೈಕೋರ್ಟ್ ಇದರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದಾಗಿದೆ. ಹೈಕೋರ್ಟ್ ಹೊರಡಿಸಿರುವ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅಗತ್ಯ ದಾಖಲೆಗಳಾದ ಐಡಿ ಪೂಫ್, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಭಾವಚಿತ್ರವನ್ನು ಅಪ್ಲೋಡ್ ಮಾಡುವ ಮೂಲಕ ಫಾರ್ಮ್ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 15, 2026 ಕೊನೇಯ ದಿನಾಂಕವಾಗಿರುತ್ತದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.