23/04/2026

Law Guide Kannada

Online Guide

ಮಹಿಳಾ ನೌಕರರಿಗೆ ಋತುಚಕ್ರ ರಜೆ ಕಟ್ಟುನಿಟ್ಟಾಗಿ ಜಾರಿಗೆ ತನ್ನಿ- ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಹಿಳಾ ನೌಕರರಿಗೆ ತಿಂಗಳಿಗೆ ಒಮ್ಮೆ ಕಡ್ಡಾಯ ಋತುಚಕ್ರ ರಜೆ ನೀಡಬೇಕು. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ ನೀತಿಯನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿಯ ಹೋಟೆಲ್ ನೌಕರರೊಬ್ಬರು ತಮಗೆ ರಜೆ ನೀಡುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ತೀರ್ಪು ನೀಡಿದೆ. ಕೆಲವು ಉದ್ಯೋಗದಾತರ ಸಂಘಟನೆಗಳು ಈ ನೀತಿಯನ್ನು ವಿರೋಧಿಸಿದ್ದರೂ, ಮಹಿಳೆಯರ ಜೈವಿಕ ಅಗತ್ಯತೆಗಳನ್ನು ಗೌರವಿಸುವುದು ಸಮಾನತೆಯ ಸಂಕೇತ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ನೋಂದಾಯಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ. ಶಾಶ್ವತ, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಈ ವಿಸ್ತರಣೆ ಮಾಡಬೇಕು. ಕೇವಲ ಸಾಫ್ಟ್ವೇರ್ ಅಥವಾ ದೊಡ್ಡ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ ಅಸಂಘಟಿತ ವಲಯದ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಋತುಚಕ್ರದ ರಜೆಗೆ ಅನುಮೋದನೆಯನ್ನು ನೀಡಿದ್ದು, ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ಆಕ್ಷೇಪವೆತ್ತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಇದನ್ನು ಸರಿಯಾದ ರೀತಿಯಲ್ಲಿ ಹಾಗೂ ಕಡ್ಡಾಯವಾಗಿ ಜಾರಿಗೆ ತರುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶ ಹೊರಡಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.