06/05/2026

Law Guide Kannada

Online Guide

6 ವರ್ಷದ ಒಳಗಿನ ಮಕ್ಕಳಿಗಷ್ಟೇ ಹೊಸ ಆಧಾರ ಕಾರ್ಡ್: ಶಾಸನಾತ್ಮಕ ಕ್ರಮದ ಅಗತ್ಯ ಸಾರಿದ ಸುಪ್ರೀಂ ಕೋರ್ಟ್

ನವದೆಹಲಿ: ಕೇವಲ 6 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಹೊಸ ಆಧಾರ್ ಕಾರ್ಡ್ಗಳ ವಿತರಣೆಯನ್ನು ಸೀಮಿತಗೊಳಿಸುವ ಯಾವುದೇ ಪ್ರಸ್ತಾವನೆಯು ಜಾರಿಗೆ ಬರಬೇಕಾದರೆ ಶಾಸನಾತ್ಮಕ ಕ್ರಮದ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಸಂಬಂಧ ವಕೀಲರಾದ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರ್ಜಿದಾರರು ಈ ಎಲ್ಲಾ ಸಮಸ್ಯೆಗಳನ್ನು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಬೇಕು. ಈ ಮೂಲಕ ಅವರು ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿತು.

ಅರ್ಜಿಯಲ್ಲಿನ ಬೇಡಿಕೆಗಳ ಬಗ್ಗೆ ಯಾವುದೇ ಅಂತಿಮ ತೀರ್ಪು ನೀಡದ ನ್ಯಾಯಾಲಯ, ಅರ್ಜಿದಾರರ ಈ ಅರ್ಜಿಯನ್ನೇ ಸರ್ಕಾರಕ್ಕೆ ಸಲ್ಲಿಸಿದ ‘ಮನವಿ’ ಎಂದು ಪರಿಗಣಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.