30/05/2026

Law Guide Kannada

Online Guide

ಕಾಯ್ದಿರಿಸಿದ ತೀರ್ಪುಗಳನ್ನು ಮೂರು ತಿಂಗಳೊಳಗೆ ಪ್ರಕಟಿಸಿ- ಹೈಕೋರ್ಟ್ ಗಳಿಗೆ ಸುಪ್ರೀಂ ಖಡಕ್ ಸೂಚನೆ

ನವದೆಹಲಿ: ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ದೇಶದ ಎಲ್ಲಾ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನವೊಂದನ್ನ ನೀಡಿದೆ.

ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ಬಳಿಕ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ಎಲ್ಲಾ ಹೈಕೋರ್ಟ್ ಗಳಿಗೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಖಡಕ್ ಸೂಚನೆ ನೀಡಿದೆ.

ಎಲ್ಲಾ ಹೈಕೋರ್ಟ್ ಗಳು ಆದೇಶಗಳನ್ನು ಕಾಯ್ದಿರಿಸಿದ ಮೂರು ತಿಂಗಳೊಳಗೆ ತೀರ್ಪುಗಳನ್ನು ನೀಡಬೇಕು. ಇಲ್ಲದಿದ್ದರೇ ದಾವೆ ಹೂಡುವವರಿಗೆ ಸರಿಪಡಿಸಲಾಗದ ನಷ್ಟವಾಗುತ್ತದೆ . ಹಾಗೆಯೇ ಜಾಮೀನು ಅರ್ಜಿಗಳಂತಹ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸಾಧ್ಯವಾದಷ್ಟು ಬೇಗ ವಿಲೇವಾರಿ ಮಾಡಬೇಕು. ಜಾಮೀನು ಅರ್ಜಿಗಳನ್ನು ಒಂದೇ ದಿನದಲ್ಲಿ ಇತ್ಯರ್ಥಪಡಿಸುವುದು ಸೂಕ್ತ. ಆದೇಶಗಳನ್ನು ಕಾಯ್ದಿರಿಸಿದ್ದರೆ, ಅವುಗಳನ್ನು ಮರುದಿನದೊಳಗೆ ಉಚ್ಚರಿಸಿ ಅಪ್ ಲೋಡ್ ಮಾಡಬೇಕು ಎಂದು ತಿಳಿಸಿದೆ.

ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ತ್ವರಿತ ನಿರ್ಧಾರ ಅತ್ಯಗತ್ಯ ಎಂದು ಕೋರ್ಟ್ ಒತ್ತಿ ಹೇಳಿದ್ದು, ವಿಶೇಷವಾಗಿ ಜಾಮೀನು ಅರ್ಜಿಗಳನ್ನು ಸಾಧ್ಯವಾದರೆ ಅದೇ ದಿನವೇ ವಿಲೇವಾರಿ ಮಾಡಬೇಕು . ಜಾಮೀನು ನೀಡುವ ಅಥವಾ ಶಿಕ್ಷೆಯನ್ನು ಅಮಾನತುಗೊಳಿಸುವ ಆದೇಶಗಳನ್ನು ಜೈಲು ಅಧಿಕಾರಿಗಳಿಗೆ ತಕ್ಷಣವೇ ತಿಳಿಸಬೇಕು. ವಿಚಾರಣಾಧೀನ ಕೈದಿ ಅಥವಾ ಅಪರಾಧಿಯನ್ನು ಅದೇ ದಿನ ಅಥವಾ ಮರುದಿನ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.