19/06/2026

Law Guide Kannada

Online Guide

ಕೇಸ್ ತನಿಖೆ ಮುಗಿದು ಚಾರ್ಚ್ ಶೀಟ್ ಸಲ್ಲಿಕೆ ಬಳಿಕವೂ ನಿರೀಕ್ಷಣಾ ಜಾಮೀನು ಮುಂದುವರೆಯುತ್ತೆ- ಹೈಕೋರ್ಟ್

ಬೆಂಗಳೂರು: ಕ್ರಿಮಿನಲ್ ಪ್ರಕರಣದಲ್ಲಿ ಒಮ್ಮೆ ಮಂಜೂರಾದ ನಿರೀಕ್ಷಣಾ ಜಾಮೀನು, ಪ್ರಕರಣದ ತನಿಖೆ ಮುಗಿದು ಆರೋಪಪಟ್ಟಿ ಸಲ್ಲಿಕೆಯಾದ ಬಳಿಕವೂ ಮುಂದುವರೆಯಲಿದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ನಿರೀಕ್ಷಣಾ ಜಾಮೀನು ಇದ್ದರೂ ಬಂಧನಕ್ಕೆ ಆದೇಶಿಸಿದ್ದ ವಿಚಾರಣಾಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ಏಕಸದಸ್ಯ ಪೀಠವು, ಅರ್ಜಿದಾರರ ಅರ್ಜಿಯನ್ನು ಪುರಸ್ಕರಿಸಿ, ವಿಶೇಷ ನ್ಯಾಯಾಲಯದ ಬಂಧನ ಆದೇಶವನ್ನು ರದ್ದುಪಡಿಸಿತು.

ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ ಎಂಬ ಕಾರಣಕ್ಕೆ ಆರೋಪಿಯು ನ್ಯಾಯಾಲಯಕ್ಕೆ ಶರಣಾಗಿ ರೆಗ್ಯೂಲರ್ ಜಾಮೀನು ಪಡೆಯಬೇಕೆಂಬ ಅವಶ್ಯಕತೆ ಇಲ್ಲ. ನಿರೀಕ್ಷಣಾ ಜಾಮೀನಿನ ರಕ್ಷಣೆ ಚಾರ್ಜ್ಶೀಟ್ ಸಲ್ಲಿಕೆ ಬಳಿಕವೂ ಮುಂದುವರಿಯಲಿದೆ ಎಂದು ನ್ಯಾಯಪೀಠ ತಿಳಿಸಿತು.

ಒಮ್ಮೆ ಮಂಜೂರಾದ ನಿರೀಕ್ಷಣಾ ಜಾಮೀನು ವಿಚಾರಣೆ ಪೂರ್ಣಗೊಳ್ಳುವವರೆಗೂ ಮುಂದುವರಿಯಲಿದೆ. ಒಮ್ಮೆ ಮಂಜೂರಾದ ನಿರೀಕ್ಷಣಾ ಜಾಮೀನು ರದ್ದಾಗುವುದಕ್ಕೂ ಮೊದಲು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವುದಕ್ಕೆ ಅವಕಾಶವಿಲ್ಲ. ನಿರೀಕ್ಷಣಾ ಜಾಮೀನು ಮಂಜೂರಾದ ಪ್ರಕರಣದಲ್ಲಿ, ಸರ್ಕಾರ ಸಂತ್ರಸ್ತೆ ಪರವಾಗಿ ನಿರೀಕ್ಷಣಾ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸದಿದ್ದರೂ, ಆರೋಪಿಯನ್ನು ವಶಕ್ಕೆ ಪಡೆಯುವಂತೆ ನಿರ್ದೇಶಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ದೋಷಪೂರಿತವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.