SC, ST ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು,ಅಕ್ಟೋಬರ್,12,2026 (www.justkannada.in): ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಅಧಿನಿಯಮ–2022ರಡಿ ಪರಿಶಿಷ್ಟ ಜಾತಿಯವರಿಗೆ ಶೇ.17 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.7ರಷ್ಟು ಹೆಚ್ಚಿಸಲಾದ ಮೀಸಲಾತಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಶೈಕ್ಷಣಿಕ ಸಂಸ್ಥೆ ರಾಜ್ಯಾಧೀನ ಸೇವೆಗಳಲ್ಲಿ ಮೀಸಲಾತಿ ಹೆಚ್ಚಳದ ಕಾಯ್ದೆಯನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರಾ ಎಂಬುವವರು ಪಿಐಎಲ್ ಸಲ್ಲಿಸಿದ್ದರು. ಈ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭುಬಖ್ರು ನ್ಯಾಯಾಧೀಶರಾದ ಕೆಎಸ್ ಹೇಮಲೇಖಾ ಅವರಿದ್ದ ಪೀಠವು , ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೇರಿಸಿದ್ದ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶಿಸಿದೆ.
ಪರಿಶಿಷ್ಟ ಜಾತಿಗೆ 15% ಮತ್ತು ಪರಿಶಿಷ್ಟ ಪಂಗಡಕ್ಕೆ 3% ಮೀಸಲಾತಿ ಇತ್ತು. ನ್ಯಾ.ನಾಗಮೋಹನ್ ದಾಸ್ ಸಮಿತಿ ಜನಸಂಖ್ಯೆ ಆಧಾರದಲ್ಲಿ ಎಸ್ಸಿ ಮೀಸಲಾತಿ 15% ನಿಂದ 17%ಗೆ ಹಾಗೂ ಎಸ್ಟಿ ಮೀಸಲಾತಿ 3% ನಿಂದ 7%ಗೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.
ಪರಿಶಿಷ್ಟರ ಮೀಸಲು ಪ್ರಮಾಣವನ್ನು ಶೇ.18 ರಿಂದ ಶೇ.24ಕ್ಕೆ ಹೆಚ್ಚಿಸುವ ಸಂಬಂಧ ರೂಪಿಸಲಾಗಿರುವ ಕರಡು ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈ ಸಂಬಂಧ ಅಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಬಳಿಕ ರಾಜ್ಯಪಾಲರು ಸಹ ಸುಗ್ರೀವಾಜ್ಞೆಗೆ ಒಪ್ಪಿಗೆ ಸೂಚಿಸಿದ್ದರು. ನಂತರ ಪರಿಶಿಷ್ಟರ ಜಾತಿಯ ಮೀಸಲಾತಿ ಪ್ರಮಾಣ ಶೇ. 15 ರಿಂದ 17 ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಶೇ. 3 ರಿಂದ 7ಕ್ಕೆ ಹೆಚ್ಚಿಸಿ ಅಧಿಕೃತ ವಿಶೇಷ ರಾಜ್ಯಪತ್ರವನ್ನು ಸರ್ಕಾರ ಪ್ರಕಟಿಸಿತ್ತು.
ಎಚ್ ಎನ್ ವೆಂಕಟೇಶ್
ಗೌರವ ಸಂಪಾದಕರು
ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಮೈಸೂರು
