ನ್ಯಾಯಾಂಗ ಇತಿಹಾಸದಲ್ಲೇ ಅಪರೂಪ ಬೆಳವಣಿಗೆ: ಹೈಕೋರ್ಟ್ ನ್ಯಾ. ಯಶವಂತ್ ವರ್ಮಾ ದಿಢೀರ್ ರಾಜೀನಾಮೆ
ಅಲಹಾಬಾದ್,ಏಪ್ರಿಲ್,10,2026 (www.justkannada.in): ನ್ಯಾಯಾಂಗ ಇತಿಹಾಸದಲ್ಲೇ ಅತ್ಯಂತ ಅಪರೂಪದ ಬೆಳವಣಿಗೆ ನಡೆದಿದ್ದು, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ನಿವಾಸದಲ್ಲಿ ಬೆಂಕಿ ಹತ್ತಿಕೊಂಡಿದ್ದ ವೇಳೆ ಭಾರೀ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಆರೋಪಗಳ ಆಂತರಿಕ ವಿಚಾರಣೆಯನ್ನು ಎದುರಿಸುತ್ತಿರುವಾಗಲೇ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರಪತಿಗಳಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಯಶವಂತ್ ವರ್ಮಾ ಅವರು ತಮ್ಮ ನಿರ್ಧಾರಕ್ಕೆ ಯಾವುದೇ ಸ್ಪಷ್ಟ ಕಾರಣವನ್ನು ನೀಡಿಲ್ಲ. ಈ ನಿರ್ಧಾರಕ್ಕೆ ನನ್ನನ್ನು ಪ್ರೇರೇಪಿಸಿದ ಕಾರಣಗಳ ಬಗ್ಗೆ ಬರೆದು ನಿಮ್ಮ ಗೌರವಾನ್ವಿತ ಕಚೇರಿಗೆ ಹೊರೆಯಾಗಲು ನಾನು ಇಷ್ಟಪಡುವುದಿಲ್ಲ. ಆದರೆ ತೀವ್ರ ದುಃಖದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನಿವಾಸದಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಪತ್ತೆಯಾದ ವಿವಾದದ ನಂತರ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ದೆಹಲಿ ಹೈಕೋರ್ಟ್ನಿಂದ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಲಾಗಿತ್ತು. ಇದೀಗ ರಾಷ್ಟ್ರಪತಿ ಅವರಿಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
2025 ಮಾರ್ಚ್ 14 ರಂದು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸಕ್ಕೆ ಬೆಂಕಿಯ ಹೊತ್ತಿಕೊಂಡು ಈ ಸಂದರ್ಭದಲ್ಲಿ ನಿವಾಸದಲ್ಲಿ ದೊಡ್ಡ ಮೊತ್ತದ ನಗದು ಪತ್ತೆಯಾಗಿತ್ತು. ಈ ವಿಷಯದ ಕುರಿತು ಸುಪ್ರೀಂ ಕೋರ್ಟ್ ತನಿಖಾ ವರದಿಯನ್ನು ಸಹ ಪ್ರಕಟಿಸಿತ್ತು. 2025 ಆಗಸ್ಟ್ 12 ರಂದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವರ್ಮಾ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಮೂವರು ಸದಸ್ಯರ ತನಿಖಾ ಸಮಿತಿ ರಚಿಸಿದ್ದರು.ಇದೀಗ ದೋಷಾರೋಪಣೆಗಳ ಪ್ರಕ್ರಿಯೆಗಳ ನಡುವೆಯೇ ಯಶವಂತ ವರ್ಮಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿ
