ಕರ್ನಾಟಕ ಹೈಕೋರ್ಟ್ ಗೆ ಮೂವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು
ಬೆಂಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ನ್ಯಾಯಾಂಗ ಅಧಿಕಾರಿಗಳಾದ ರಾಜೇಶ್ವರಿ ನಾರಾಯಣ ಹೆಗ್ಡೆ, ಕೆ ಗಣೇಶ್ ಶಾಂತಿ ಮತ್ತು ಮಹದೇವಪ್ಪ ಬೃಂಗೇಶ್ ಅವರ ಪದೋನ್ನತಿಗೆ ಶಿಫಾರಸ್ಸು ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಸೂರ್ಯಕಾಂತ್ ಅವರ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿದೆ. ಕರ್ನಾಟಕ ಹೈಕೋರ್ಟ್ಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 45 ನ್ಯಾಯಮೂರ್ತಿಗಳ ಹುದ್ದೆಗಳು ಮಾತ್ರ ಭರ್ತಿಯಾಗಿವೆ.
ರಾಜ್ಯದ ಉನ್ನತ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಿಸುವ ಮತ್ತು ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಪೂರಕವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಕೊಲಿಜಿಯಂನ ಈ ಶಿಫಾರಸನ್ನು ಈಗ ಕೇಂದ್ರ ಕಾನೂನು ಸಚಿವಾಲಯಕ್ಕೆ ಕಳುಹಿಸಲಾಗುವುದು. ಅಲ್ಲಿಂದ ರಾಷ್ಟ್ರಪತಿಗಳ ಅಂಕಿತ ಬಿದ್ದ ನಂತರ ಅಧಿಕೃತವಾಗಿ ನೇಮಕಾತಿ ಆದೇಶ ಹೊರಬೀಳಲಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿ
