ರಾಜ್ಯಪಾಲರ ಅಂಕಿತಕ್ಕೆ ಗಡುವು: ವಕೀಲರ ವಾಗ್ವಾದ: ಎಚ್ಚರಿಕೆ ಧ್ವನಿಯಲ್ಲಿ ಎಚ್ಚರಿಸಿದ ಸುಪ್ರೀಂ CJI
ನವದೆಹಲಿ: ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎನ್ನುವ ಕುರಿತು ಪರಿಶೀಲಿಸಲು ರಾಷ್ಟ್ರಪತಿಗಳು ಮಾಡಿದ ಶಿಫಾರಸ್ಸಿನ ಕುರಿತು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ವೇಳೆ ಸರ್ಕಾರವನ್ನು ಪ್ರತಿನಿಧಿಸುವ ಹಿರಿಯ ವಕೀಲ ಅಭಿಷೇಕ್ ಮನು ಸಿಂಫ್ಟಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ನಡುವೆ ವಾಗ್ವಾದ ಉಂಟಾಯಿತು. ಈ ಸಮಯದಲ್ಲಿ ತೀರ್ಪು ಪ್ರಸ್ತುತ ಯಾವ ರಾಜಕೀಯ ಪಕ್ಷ ಅಧಿಕಾರದಲ್ಲಿದೆ ಅಥವಾ ಹಿಂದೆ ಅಧಿಕಾರದಲ್ಲಿತ್ತು ಎಂಬುದನ್ನು ಅವಲಂಬಿಸಿರುವುದಿಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಗವಾಯಿ ಎಚ್ಚರಿಕೆಯ ಧ್ವನಿಯಲ್ಲಿ ವಕೀಲರಿಗೆ ಎಚ್ಚರಿಸಿದರು.
ರಾಷ್ಟ್ರಪತಿ ದೌಪದಿ ಮುರ್ಮು ಅವರು ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ಗೆ ಮಾಡಿದ ಶಿಫಾರಸ್ಸಿಗೆ ಸಂಬಂಧಿಸಿದ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್. ಪಿ ಎಸ್ ನರಸಿಂಹ ಹಾಗೂ ಅತುಲ್ ಎಸ್ ಚಂದೂರ್ಕರ್ ಅವರಿದ್ದ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ನಡೆಯಿತು.
ರಾಜ್ಯಪಾಲರು ಮಸೂದೆಗಳಿಗೆ ಒಪ್ಪಿಗೆ ನೀಡದೆ ತಡೆಹಿಡಿದ ಪ್ರಕರಣಗಳ ಕುರಿತು ವಿವರಗಳ ಸಲ್ಲಿಕೆ ಕುರಿತು ತಮಿಳುನಾಡು ಸರ್ಕಾರವನ್ನು ಪ್ರತಿನಿಧಿಸುವ ಹಿರಿಯ ವಕೀಲ ಅಭಿಷೇಕ್ ಮನು ಸಿಂಫ್ಟಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ನಡುವೆ ವಾಗ್ವಾದ ಉಂಟಾಯಿತು.
ಅಭಿಷೇಕ್ ಮನು ಸಿಂಘೀ ಅವರು ನನ್ನ ಬಳಿ ತಮಿಳುನಾಡು ಮತ್ತು ಕೇರಳದ ಮಾಹಿತಿ ಇದೆ”ಎಂದು ತಿಳಿಸಿ ರಾಜ್ಯಪಾಲರು ಮಸೂದೆ ತಡೆದ ಉದಾಹರಣೆಗಳನ್ನು ವಿವರಿಸಲು ಮುಂದಾದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮೆಹ್ರಾ ಅವರು ಉಳಿದ ರಾಜ್ಯಗಳ ಪಟ್ಟಿ ನನ್ನಲ್ಲಿದೆ. ಅವರು ಕೆಟ್ಟ ಹಾದಿ ತುಳಿಯುವುದಾದರೆ ತಾನೂ ಅದೇ ಹಾದಿಯಲ್ಲಿ ಸಾಗಲು ಹಿಂಜರಿಯುವುದಿಲ್ಲ. ಆದರೆ ಇದು ರಾಷ್ಟ್ರಪತಿಗಳ ಶಿಫಾರಸ್ಸಿನ ಪ್ರಕರಣ ಎಂದರು.
ಈ ಸಮಯದಲ್ಲಿ ಮಧ್ಯಪ್ರವೇಶಿಸಿದ ಸಿಜೆಐ ಗವಾಯಿ ಅವರು, ಯಾವ ಪಕ್ಷ ಅಧಿಕಾರದಲ್ಲಿತ್ತು ಅಥವಾ ಇದೆ ಎಂಬುದನ್ನು ಆಧರಿಸಿ ನ್ಯಾಯಾಲಯ ಪ್ರಕರಣ ನಿರ್ಧರಿಸುವುದಿಲ್ಲ ಎಂದು ಎಚ್ಚರಿಕೆಯ ಧ್ವನಿಯಲ್ಲಿ ತಿಳಿಸಿದರು.
ಈ ಹಂತದಲ್ಲಿ ಸಿಂಘ್ವಿ ಅವರು ತೀಕ್ಷವಾಗಿ ಪ್ರತಿಕ್ರಿಯಿಸುತ್ತಾ, “ಮಿ. ಮಹ್ರಾ, ನಿಮ್ಮ ಬೆದರಿಕೆಗಳು ಕೆಲಸ ಮಾಡುವುದಿಲ್ಲ” ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ನ್ಯಾಯಾಲಯವು ಯಾವ ರಾಜಕೀಯ ವ್ಯವಸ್ಥೆ ಅಧಿಕಾರದಲ್ಲಿದೆ ಅಥವಾ ಇತ್ತು ಎಂಬುದರ ಆಧಾರದ ಮೇಲೆ ಪ್ರಕರಣದ ತೀರ್ಪು ನೀಡುವುದಿಲ್ಲ ಎಂದಿತು. ಬಳಿಕ ಕಾನೂನು ವಾದಗಳಿಗೆ ತಮ್ಮನ್ನು ಸೀಮಿತಗೊಳಿಸಿಕೊಳ್ಳುವಂತೆ ವಕೀಲರಿಗೆ ನ್ಯಾಯಪೀಠ ಸೂಚಿಸಿತು.
ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರು ತಮ್ಮ ಮುಂದಿರಿಸಲಾದ ಮಸೂದೆಗಳಿಗೆ ಅಂಕಿತ ಹಾಕುವುದನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಕಳೆದ ಏಪ್ರಿಲ್ನಲ್ಲಿ ಕಾಲಮಿತಿ ನಿಗದಿಪಡಿಸಿತ್ತು. ಅಲ್ಲದೆ, ಸಂವಿಧಾನದ 200ನೇ ವಿಧಿಯಡಿಯಲ್ಲಿ ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡದೆ ಇರುವುದು ನ್ಯಾಯಾಂಗ ಪರಿಶೀಲನೆಗೆ ಒಳಪಡುತ್ತದೆ ಎಂದು ತೀರ್ಪು ನೀಡಿತ್ತು ಇದನ್ನು ಪ್ರಶ್ನಿಸಿದ್ದ ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್ ಸಲಹೆ ಕೋರಿ ಶಿಫಾರಸ್ಸು ಮಾಡಿದ್ದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
