ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಡಿಜಿಟಲ್ ಸ್ಪರ್ಶ: ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಕ್ರಮ –ನೂತನ ಅಧ್ಯಕ್ಷ ಟಿ.ಜೆ. ಶಿವಶಂಕರೇಗೌಡ
ಬೆಂಗಳೂರು: ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಡಿಜಿಟಲ್ ಸ್ಪರ್ಶ ನೀಡಲಾಗುತ್ತದೆ. ಹಾಗೆಯೇ ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಗ್ರಾಹಕ ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂಧು ರಾಜ್ಯ ಗ್ರಾಹಕ ಆಯೋಗದ ನೂತನ ಅಧ್ಯಕ್ಷ ಟಿ.ಜೆ. ಶಿವಶಂಕರೇಗೌಡ ತಿಳಿಸಿದರು.
ಕರ್ನಾಟಕ ರಾಜ್ಯ ಗ್ರಾಹಕ ಆಯೋಗದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಟಿ.ಜೆ. ಶಿವಶಂಕರೇಗೌಡ ಅವರು, ರಾಜ್ಯ ಆಯೋಗಗಳಲ್ಲಿ ಆಡಳಿತಕ್ಕೆ ಚುರುಕು ನೀಡಬೇಕು. ರಾಜ್ಯ ಆಯೋಗದಲ್ಲಿ 7 ಸಾವಿರ ಜಿಲ್ಲಾ ಆಯೋಗದಲ್ಲಿ 7 ಸಾವಿರ ಪ್ರಕರಣಗಳು ಬಾಕಿ ಉಳಿದಿದ್ದು ಇವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಮುಖಾಂತರ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಪ್ರಥಮ ಸ್ಥಾನಕ್ಕೇರಿಸುವ ಗುರಿ ಹೊಂದಲಾಗಿದೆ ಎಂದರು.
ಆಯೋಗದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕ್ರಮ ಕೈಗೊಳ್ಳುವುದು. ಹೈಕೋರ್ಟ್ ರಿಜಿಸ್ಟ್ರಾರ್ ಆಗಿದ್ದ ಸಂದರ್ಭದಲ್ಲಿ ಡಿಜಿಟಲೀಕರಣಕ್ಕೆ ಆದ್ಯತೆ ನೀಡಲಾಗಿತ್ತು. ಅದೇ ರೀತಿ, ಗ್ರಾಹಕ ಆಯೋಗಗಳಲ್ಲೂ ಡಿಜಿಟಲೀಕರಣಕ್ಕೆ ಆದ್ಯತೆ ನೀಡಲಾಗುವುದು. ಇನ್ನು ಮುಂದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಶಿವಶಂಕರೇಗೌಡ ತಿಳಿಸಿದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
