ವರದಕ್ಷಿಣೆ ಕಿರುಕುಳ ಕೇಸ್: ಹೈಕೋರ್ಟ್ ಜಾಮೀನು ಮಂಜೂರು ಆದೇಶ ರದ್ದುಗೊಳಿಸಿದ ಸುಪ್ರೀಂ
ನವದೆಹಲಿ: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗೆ ಷರತ್ತು ಬದ್ದ ನಿರೀಕ್ಷಣಾ ಜಾಮೀನು ನೀಡಿ ಜಾರ್ಖಂಡ್ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಕಳೆದ ಫೆಬ್ರುವರಿ 25ರಂದು ಜಾರ್ಖಂಡ್ ಹೈಕೋರ್ಟ್ ಈ ರೀತಿ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಈ ಆದೇಶದ ವಿರುದ್ಧ ಅನಿಲ್ ಕುಮಾರ್ ಅವರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು.
ಈ ಕುರಿತು ವಿಚಾರಣೆ ನಡೆಸಿದ ದೀಪಂಕರ್ ದತ್ತಾ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರನ್ನು ಒಳಗೊಂಡ ನ್ಯಾಯಪೀಠವು, ಪತ್ನಿಯೊಂದಿಗೆ ವೈವಾಹಿಕ ಸಂಬಂಧ ನಿರ್ವಹಿಸಬೇಕು ಹಾಗೂ ಆಕೆಯೊಂದಿಗೆ ಘನತೆಯಿಂದ ನಡೆದುಕೊಳ್ಳಬೇಕು ಎಂಬ ಷರತ್ತಿನೊಂದಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಜಾರ್ಖಂಡ್ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ಈ ರೀತಿಯ ಷರತ್ತಿನೊಂದಿಗೆ ಹೈಕೋರ್ಟ್ ಜಾಮೀನು ನೀಡಬಾರದಿತ್ತು ಇದರಿಂದ ಮತ್ತಷ್ಟು ವ್ಯಾಜ್ಯ ಉಂಟಾಗಬಹುದು ಎಂದು ಅಭಿಪ್ರಾಯಪಟ್ಟಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
