ಅಂಗಾಂಗ ದಾನ ಮಾಡುವ ನೌಕರರಿಗೆ ಗುಡ್ ನ್ಯೂಸ್: 42 ವಿಶೇಷ ಸಾಂದರ್ಭಿಕ ರಜೆ ಘೋಷಣೆ

ನವದೆಹಲಿ: ಅಂಗಾಂಗ ದಾನ ಮಾಡುವ ನೌಕರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನದ ರಜೆ ನೀಡುವುದಾಗಿ ಕೇಂದ್ರ ಸರ್ಕಾರದ ಘೋಷಣೆ ಮಾಡಿದೆ.
ಲೋಕಸಭೆ ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಕೇಂದ್ರ ಸಹಾಯಕ ಸಿಬ್ಬಂದಿ ಸಚಿವ ಜಿತೇಂದ್ರ ಸಿಂಗ್ ಈ ಕುರಿತು ಉತ್ತರ ನೀಡಿದ್ದಾರೆ. ಅಂಗಾಂಗ ದಾನ ಮಾಡುವ ಕೇಂದ್ರ ಸರ್ಕಾರಿ ನೌಕರರು 42 ದಿನಗಳ ಕಾಲ ವಿಶೇಷ ಸಾಂದರ್ಭಿಕ ರಜೆಯನ್ನು ಪಡೆಯಲು ಅರ್ಹರು ಎಂದು ತಿಳಿಸಿದ್ದಾರೆ.
2023ರಲ್ಲಿ ಈ ಬಗ್ಗೆ ಸಚಿವಾಲಯ ಆದೇಶ ಹೊರಡಿಸಿದೆ. ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ದಿನದಿಂದಲೇ ವಿಶೇಷ ಸಾಂದರ್ಭಿಕ ರಜೆಯನ್ನು ನೌಕರರು ಪಡೆದುಕೊಳ್ಳಬಹುದು. ವೈದ್ಯರ ಶಿಫಾರಸ್ಸಿನಿಂತೆ ಒಂದು ವಾರದ ಮೊದಲೇ ರಜೆ ತೆಗೆದುಕೊಳ್ಳಲು ಅವಕಾಶ ಇದೆ ಎಂಬುದನ್ನೂ ಸಚಿವರು ತಿಳಿಸಿದ್ದಾರೆ.
ಅಂಗಾಂಗ ದಾನ ಒಬ್ಬರಿಗೆ ಜೀವದಾನ ನೀಡುವಂತಹ ಬಹುದೊಡ್ಡ ಮಾಧ್ಯಮವಾಗಿದೆ. ಆದ್ದರಿಂದ ಅಂಗಾಂಗ ದಾನ ಮಾಡುವ ನೌಕರರಿಗೆ ಈ ರಜೆ ಲಭಿಸಲಿದೆ. ದಾನಿಗಳ ಅಂಗಾಂಗ ಪಡೆಯಲು ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಕೈಗೊಂಡಿದ್ದರೂ ಸರ್ಕಾರಿ ನೋಂದಾಯಿತ ವೈದ್ಯರ ಸಲಹೆಯಂತೆ ಈ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ