ವಕೀಲರ ಜೊತೆ ಹೈಕೋರ್ಟ್ ನ್ಯಾಯಮೂರ್ತಿಗಳ ನಡವಳಿಕೆ: ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಕೀಲರ ಸಂಘ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಕಲಾಪಗಳ ವೇಳೆ ವಕೀಲರ ಜೊತೆಗೆ ನ್ಯಾಯಮೂರ್ತಿಗಳು ನಡೆದುಕೊಳ್ಳುವ ಬಗ್ಗೆ ಬೆಂಗಳೂರು ವಕೀಲರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಕರ್ನಾಟಕ ಹೈಕೋರ್ಟ್ ಕಲಾಪಗಳ ವೇಳೆ ವಕೀಲರ ಜೊತೆಗೆ ನ್ಯಾಯಮೂರ್ತಿಗಳು ನಡೆದುಕೊಳ್ಳುವ ರೀತಿ ಆಘಾತಕಾರಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿರುವ ಬೆಂಗಳೂರು ವಕೀಲರ ಸಂಘ ಈ ಬಗ್ಗೆ ವಕೀಲರ ಸಂಘದ ಸಭೆಯಲ್ಲಿ ನಿರ್ಣಯ ಅಂಗೀಕರಿಸಿದ್ದು, ನ್ಯಾಯಮೂರ್ತಿಗಳಿಬ್ಬರ ನಡವಳಿಕೆಯನ್ನು ವಿರೋಧಿಸಿದೆ.
ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಅವರು ತೆರೆದ ನ್ಯಾಯಾಲಯದ ಕೋರ್ಟ್ ಕಲಾಪದಲ್ಲಿ ವಕೀಲ ವೃಂದದ ಜೊತೆಗೆ ಹಿತಕರವಾಗಿ ನಡೆದುಕೊಳ್ಳುತ್ತಿಲ್ಲ. ನ್ಯಾಯಮೂರ್ತಿಗಳ ನಡವಳಿಕೆ ಆಘಾತಕಾರಿಯಾಗಿದೆ ಎಂದು ವಕೀಲರ ಸಂಘ ಅಂಗೀಕರಿಸಿದ ನಿರ್ಣಯ ತಿಳಿಸಿದೆ.
ಕರ್ನಾಟಕ ಹೈಕೋರ್ಟ್ ವಕೀಲರು ವಿನಮ್ರ ನಡವಳಿಕೆಗೆ ದೇಶದಲ್ಲೇ ಹೆಸರುವಾಸಿಯಾಗಿದ್ದಾರೆ. ಆದರೆ, ಈ ನ್ಯಾಯಮೂರ್ತಿಗಳ ವಕೀಲರ ಜೊತೆಗಿನ ವರ್ತನೆ ಮತ್ತು ನಡವಳಿಕೆ ಸಮಾಧಾನಕರವಾಗಿಲ್ಲ ಎಂದು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿ
