06/03/2026

Law Guide Kannada

Online Guide

ಮಹಿಳೆಯ ಜೀವನಾಂಶದ ಆದೇಶ ರದ್ದುಪಡಿಸಿದ ಹೈಕೋರ್ಟ್: ಕಾರಣವೇನು?

ಅಲಹಾಬಾದ್: ದುಡಿಮೆಯ ಕುರಿತಾದ ವಾಸ್ತವಾಂಶವನ್ನು ಮರೆಮಾಚಿ ವಿಚಾರಣಾ ನ್ಯಾಯಾಲಯದಲ್ಲಿ ಪತಿಯಿಂದ ಜೀವನಾಂಶ ಕೋರಿದ್ದ ಮಹಿಳೆಗೆ ಹೈಕೋರ್ಟ್ ಶಾಕ್ ನೀಡಿದೆ.

ಪತಿಯು ಪತ್ನಿಗೆ ಜೀವನಾಂಶ ಕೊಡಬೇಕು ಎಂದು ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ರದ್ದುಪಡಿಸಿದೆ. ದುಡಿಯುವ ಮಹಿಳೆ ನಿರ್ಣಾಯಕ ವಾಸ್ತವಾಂಶಗಳನ್ನು ಮರೆಮಾಚಿದಲ್ಲಿ ಅನುಕಂಪಕ್ಕೆ ಅರ್ಹಳಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಅಂಕಿತ್ ಸಾಹಾ ಎಂಬ ವ್ಯಕ್ತಿ ತನ್ನ ಪತ್ನಿಗೆ ವಿಚ್ಚೇದನ ನೀಡಿದ್ದರು. ಆಕೆ ಸ್ನಾತಕೋತ್ತರ ಪದವೀಧರರಾಗಿದ್ದು, ಉದ್ಯೋಗದಿಂದ 36,000/- ರೂ. ವೇತನ ಪಡೆಯುತ್ತಿದ್ದರು. ಇದರ ವಿಚಾರಣೆ ನಡೆಸಿದ ಕೌಟುಂಬಿಕ ನ್ಯಾಯಾಲಯ ಪತಿ ಜೀವನಾಂಶ ಕೊಡಬೇಕು ಎಂದು ತೀರ್ಪು ಪ್ರಕಟಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಪತಿ ಅಂಕಿತ್ ಸಾಹಾ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು, ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಪಡಿಸಿತು. ಮಹಿಳೆ ತಿಂಗಳಿಗೆ 36,000 ರೂ. ಆದಾಯ ಹೊಂದಿದ್ದಾರೆ. ಆಕೆಗೆ ಬೇರೆ ಯಾವುದೇ ಹೊಣೆಗಾರಿಕೆ ಇಲ್ಲ. ಆದರೆ, ಪುರುಷ (ಪತಿ) ತನ್ನ ವಯಸ್ಸಾದ ಹೆತ್ತವರನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾರೆ. ಹಾಗಾಗಿ, ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.