ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದ್ರೆ, ಗುಟ್ಕಾ ಉಗುಳಿದ್ರೆ ಹುಷಾರ್: ಬೀಳುತ್ತೆ 1ಸಾವಿರ ರೂ. ದಂಡ
ಬೆಂಗಳೂರು: ಇನ್ಮುಂದೆ ಯಾರಾದರೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದಿದರೇ 1 ಸಾವಿರ ರೂ. ದಂಡ ಬೀಳಲಿದೆ.
ಹೌದು ನಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1,000 ರೂ ದಂಡ ವಿಧಿಸಲಿದೆ.
ಈ ಸಂಬಂಧ ರಾಜ್ಯ ಸರ್ಕಾರವು ರೂಪಿಸಿದ್ದ, ‘ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ-2024’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 23 ರಂದು ಅಂಕಿತ ಹಾಕಿದ್ದರು. ಶುಕ್ರವಾರ ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ, ಕಾಯ್ದೆಯನ್ನು ಜಾರಿಗೆ ತರಲಾಗಿದೆ.
ಈ ಕುರಿತು ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಕಾಯ್ದೆ ಜಾರಿಗೆ ತರಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರೆಗೆ ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘಿಸುವವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.
ಹಾಗೆಯೇ ಬಾರ್, ರೆಸ್ಟೋರೆಂಟ್, ಪಬ್, ಉಪಹಾರ ಗೃಹಗಳಲ್ಲಿ ಹುಕ್ಕಾ ಸೇವನೆಗೆ ಅವಕಾಶ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ 50 ಸಾವಿರದಿಂದ ಒಂದು ಲಕ್ಷ ರೂಪಾಯಿವರೆಗೆ ದಂಡ, ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
