23/11/2026

Law Guide Kannada

Online Guide

ಪರೀಕ್ಷಾ ಕೇಂದ್ರಗಳಲ್ಲಿ ಧಾರ್ಮಿಕ ಹಕ್ಕು ರಕ್ಷಣೆ: ಮಹತ್ವದ ತೀರ್ಪು ನೀಡಿ PIL ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಪ್ರಾಧಿಕಾರಗಳೂ ಕಟ್ಟುನಿಟ್ಟಾಗಿ, ಬಿಗಿಭದ್ರತೆಯಲ್ಲಿ ಪರೀಕ್ಷೆ ನಡೆಸುತ್ತಿದ್ದು ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿ ಮಹತ್ವದ ತೀರ್ಪು ನೀಡಿದೆ.

ರಾಜ್ಯಾದ್ಯಂತ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಏಕರೂಪದ ಮತ್ತು ವ್ಯವಸ್ಥಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಿದ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

2025ರ ಏಪ್ರಿಲ್ ನಲ್ಲಿ ರಾಜ್ಯಾದ್ಯಂತ ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಧಾರವಾಡ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆಯ ಹೆಸರಿನಲ್ಲಿ ಪರೀಕ್ಷಾ ಸಿಬ್ಬಂದಿ ಕೆಲವು ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ್ದರು ಮತ್ತು ಕತ್ತರಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಜನಿವಾರ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಾಪಸ್ ಕಳುಹಿಸಲಾಗಿತ್ತು. ಈ ಘಟನೆಗಳ ವಿರುದ್ದ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಅನ್ಯಾಯವನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ 2025ರ ಜೂನ್ ನಲ್ಲಿ ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿತ್ತು.

ಅರ್ಜಿದಾರರ ಪರವಾಗಿ ಪ್ರಬಲ ವಾದ ಮಂಡಿಸಿದ್ದ ಹಿರಿಯ ವಕೀಲ ಎಸ್.ಶ್ರೀರಂಗ ಅವರು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು ಭಾರತದ ಸಂವಿಧಾನದ ಮೂರು ಪ್ರಮುಖ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದ್ದರು:
ವಿಧಿ 25 (ಧಾರ್ಮಿಕ ಸ್ವಾತಂತ್ರ್ಯದ ಹಕ್ಕು): ಜನಿವಾರ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದ್ದು, ಅದಕ್ಕೆ ಅಡ್ಡಿಪಡಿಸುವುದು ಧಾರ್ಮಿಕ ಸ್ವಾತಂತ್ರದ ಹರಣವಾಗಿದೆ. ವಿಧಿ 21A (ಶಿಕ್ಷಣದ ಹಕ್ಕು): ಧಾರ್ಮಿಕ ಚಿಹ್ನೆ ಧರಿಸಿದ್ದಾರೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ವಂಚಿತರನ್ನಾಗಿಸುವುದು ಅವರ ಶಿಕ್ಷಣದ ಮೂಲಭೂತ ಹಕ್ಕನ್ನು ಕಸಿದುಕೊಂಡಂತೆ. ವಿಧಿ 29(2) (ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯ ನಿಷೇಧ): ಧರ್ಮ ಅಥವಾ ಆಚರಣೆಯ ಆಧಾರದ ಮೇಲೆ ಶಿಕ್ಷಣ ಸಂಸ್ಥೆಗಳ ಪ್ರವೇಶ ಅಥವಾ ಪರೀಕ್ಷೆಗೆ ಅವಕಾಶ ನಿರಾಕರಿಸುವುದು ಸಂವಿಧಾನಬಾಹಿರವಾಗಿದೆ ಎಂಬುದು ಅವರ ಪ್ರತಿಪಾದನೆಯಾಗಿತ್ತು.

ಪರೀಕ್ಷಾ ವಸ್ತ್ರ ಸಂಹಿತೆ ಬಗ್ಗೆ ಕೆಇಎ ಸ್ಪಷ್ಟನೆ
ಪ್ರಕರಣದ ವಿಚಾರಣೆ ವೇಳೆ ಸ್ಪಷ್ಟನೆ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೆಇಎ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು (Dress Code) ಜಾರಿಗೊಳಿಸಿದೆ. ಇದರಂತೆ ಅರ್ಧ ತೋಳಿನ ಸರಳ ಉಡುಪು, ತೆಳುವಾದ ಚಪ್ಪಲಿ ಧರಿಸುವುದು ಕಡ್ಡಾಯವಾಗಿದ್ದು, ಲೋಹದ ಆಭರಣಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.ಆದರೆ, ಈ ವಸ್ತ್ರ ಸಂಹಿತೆಯಲ್ಲಿ ಜನಿವಾರ ಅಥವಾ ಶಿವಧಾರದಂತಹ ಧಾರ್ಮಿಕ ಚಿಹ್ನೆಗಳನ್ನು ತೆಗೆಯಬೇಕು ಎಂಬ ಯಾವುದೇ ನಿಯಮವಿಲ್ಲ ಎಂದು ವಾದಿಸಿತು ಅಲ್ಲದೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಈಗಾಗಲೇ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತು.

ವಾದಿ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ಪ್ರಾಧಿಕಾರದ ಹೇಳಿಕೆ ಮತ್ತು ಸರ್ಕಾರದ ಭರವಸೆಯನ್ನು ದಾಖಲಿಸಿಕೊಂಡಿತು. ಭವಿಷ್ಯದ ಪರೀಕ್ಷೆಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪರೀಕ್ಷಾ ಸಿಬ್ಬಂದಿಗೆ ಸ್

ಎಚ್ ಎನ್ ವೆಂಕಟೇಶ್
ಗೌರವ ಸಂಪಾದಕರು
ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
ಮೈಸೂರು

Copyright © All rights reserved. | Newsphere by AF themes.