06/03/2026

Law Guide Kannada

Online Guide

ಗೂಂಡಾ ಕಾಯ್ದೆಯಡಿ ಬಂಧನವಾಗ ಮಾರ್ಗಸೂಚಿ ಪಾಲನೆ ನಿರ್ಲಕ್ಷ್ಯ: ಹೈಕೋರ್ಟ್ ತೀವ್ರ ಬೇಸರ

ಬೆಂಗಳೂರು: ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಾಗ ಮಾರ್ಗಸೂಚಿ ಪಾಲನೆಯಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ತೀವ್ರ ಬೇಸರ ವ್ಯಕ್ತಪಡಿಸಿದೆ.

2025ರ ಜೂನ್ 3ರಂದು ಹುಬ್ಬಳ್ಳಿಯ ದಾವೂದ್ ನದಾಫ್ ಎಂಬುವರನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದ ಕ್ರಮ ಪ್ರಶ್ನಿಸಿ ಅವರ ಪತ್ನಿ ಪ್ರತಿಭಾ ತಲಪಾಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿ ಪೊಲೀಸ್ ಇಲಾಖೆಯ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಆರ್.ದೇವದಾಸ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ‘ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳನ್ನು ಮುಂಜಾಗ್ರತಾ ಕ್ರಮವಾಗಿ ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ಅಧಿಕಾರಿಗಳು ಹಳೆಯ ತಪ್ಪುಗಳನ್ನೇ ಮುಂದುವರೆಸುತ್ತಿದ್ದಾರೆ ಕಿಡಿಕಾರಿತು.

‘ಅಧಿಕಾರಿಗಳ ಸಣ್ಣಪುಟ್ಟ ತಪ್ಪುಗಳಿಂದಾಗಿ ಎದುರಾಗುವ ತಾಂತ್ರಿಕ ಕಾರಣಗಳ ಆಧಾರದಲ್ಲಿ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಒಳಗಾಗುವಂತಹ ಅರೋಪಿಗಳ ಬಿಡುಗಡೆಗೆ ಆದೇಶಿಸಬೇಕಾಗುತ್ತದೆ. ಬಂಧನಕ್ಕೆ ಒಳಗಾಗುವಂತಹ ಅರೋಪಿಗಳ ಬಿಡುಗಡೆಗೆ ಆದೇಶಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು.

ಮುಂಜಾಗ್ರತಾ ಕ್ರಮವಾಗಿ ಬಂಧನದ ಆದೇಶ ಹೊರಡಿಸುವುದಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ಮಾರ್ಗಸೂಚಿಗಳನ್ನು ಸರ್ಕಾರದ ಸಂಬಂಧಿಸಿದ ಇಲಾಖೆಗಳಿಗೆ ರವಾನಿಸುವಂತೆ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿತು. ಗೂಂಡಾ ಕಾಯ್ದೆಯಡಿ ಬಂಧಿಸುವಾಗ 13 ಅಂಶಗಳ ಮಾರ್ಗಸೂಚಿ ಪಾಲನೆ ಮಾಡುವಂತೆ ಹೈಕೋರ್ಟ್ 2019ರಲ್ಲಿ ಆದೇಶಿಸಿತ್ತು.

ಗೂಂಡಾ ಕಾಯ್ದೆಯಡಿ ಬಂಧನವಾಗ ಮಾರ್ಗಸೂಚಿ ಪಾಲನೆ ನಿರ್ಲಕ್ಷ್ಯ: ಹೈಕೋರ್ಟ್ ತೀವ್ರ ಬೇಸರ ಬೆಂಗಳೂರು: ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಾಗ ಮಾರ್ಗಸೂಚಿ ಪಾಲನೆಯಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ತೀವ್ರ ಬೇಸರ ವ್ಯಕ್ತಪಡಿಸಿದೆ.

2025ರ ಜೂನ್ 3ರಂದು ಹುಬ್ಬಳ್ಳಿಯ ದಾವೂದ್ ನದಾಫ್ ಎಂಬುವರನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದ ಕ್ರಮ ಪ್ರಶ್ನಿಸಿ ಅವರ ಪತ್ನಿ ಪ್ರತಿಭಾ ತಲಪಾಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿ ಪೊಲೀಸ್ ಇಲಾಖೆಯ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಆರ್.ದೇವದಾಸ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ‘ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳನ್ನು ಮುಂಜಾಗ್ರತಾ ಕ್ರಮವಾಗಿ ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ಅಧಿಕಾರಿಗಳು ಹಳೆಯ ತಪ್ಪುಗಳನ್ನೇ ಮುಂದುವರೆಸುತ್ತಿದ್ದಾರೆ ಕಿಡಿಕಾರಿತು.

‘ಅಧಿಕಾರಿಗಳ ಸಣ್ಣಪುಟ್ಟ ತಪ್ಪುಗಳಿಂದಾಗಿ ಎದುರಾಗುವ ತಾಂತ್ರಿಕ ಕಾರಣಗಳ ಆಧಾರದಲ್ಲಿ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಒಳಗಾಗುವಂತಹ ಅರೋಪಿಗಳ ಬಿಡುಗಡೆಗೆ ಆದೇಶಿಸಬೇಕಾಗುತ್ತದೆ. ಬಂಧನಕ್ಕೆ ಒಳಗಾಗುವಂತಹ ಅರೋಪಿಗಳ ಬಿಡುಗಡೆಗೆ ಆದೇಶಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು.

ಮುಂಜಾಗ್ರತಾ ಕ್ರಮವಾಗಿ ಬಂಧನದ ಆದೇಶ ಹೊರಡಿಸುವುದಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ಮಾರ್ಗಸೂಚಿಗಳನ್ನು ಸರ್ಕಾರದ ಸಂಬಂಧಿಸಿದ ಇಲಾಖೆಗಳಿಗೆ ರವಾನಿಸುವಂತೆ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿತು. ಗೂಂಡಾ ಕಾಯ್ದೆಯಡಿ ಬಂಧಿಸುವಾಗ 13 ಅಂಶಗಳ ಮಾರ್ಗಸೂಚಿ ಪಾಲನೆ ಮಾಡುವಂತೆ ಹೈಕೋರ್ಟ್ 2019ರಲ್ಲಿ ಆದೇಶಿಸಿತ್ತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.