19/05/2025

Law Guide Kannada

Online Guide

POCSO case of Sringeri in Chikkamagaluru district, the Court sentenced the mother of the minor girl and 3 other accused to 20 years rigorous imprisonment for forcing a minor girl into prostitution

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಪೋಕ್ಸೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪ್ರಾಪ್ತ ಬಾಲಕಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದ ಬಾಲಕಿಯ ತಾಯಿ ಹಾಗೂ ಇತರ ಮೂವರು ಆರೋಪಿಗಳಿಗೆ ಇಲ್ಲಿನ ನ್ಯಾಯಾಲಯ ೨೦ ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಇತ್ತೀಚೆಗೆ ತೀರ್ಪು ನೀಡಿದೆ.
ಈ ಪೋಕ್ಸೋ ಪ್ರಕರಣದಲ್ಲಿ ೫೩ ಆರೋಪಿಗಳಿದ್ದರು. ೪೯ ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ನ್ಯಾಯಮೂರ್ತಿ ಶಾಂತಣ್ಣ ಆಳ್ವ ಅವರು ಸಂತ್ರಸ್ತೆ ಬಾಲಕಿಯ ತಾಯಿ, ಆಕೆಗೆ ನೆರವಾದ ಇತರ ಮೂವರು ಆರೋಪಿಗಳಿಗೆ ೨೦ ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ ೨೫ ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ತಾಯಿಯೇ ತನ್ನ ಮಗಳನ್ನು ಹಣಕ್ಕಾಗಿ ವೇಶ್ಯಾವಾಟಿಕೆಗೆ ದೂಡಿದ್ದಳು. ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.