‘ಪೋಕ್ಸೊ’ ಪ್ರಕರಣ: ಕಲಾವಿದೆ ಅರ್ಚನಾ ಪಾಟೀಲ ವಿರುದ್ಧ ವಿಚಾರಣೆಗೆ ತಡೆ ನೀಡಿದ ಸುಪ್ರೀಂ
ನವದೆಹಲಿ: ಚಿತ್ರಕಲೆ ಹೇಳಿಕೊಡುವುದಾಗಿ13 ವರ್ಷದ ಬಾಲಕನನ್ನ ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಹೊತ್ತಿರುವ ಬೆಂಗಳೂರಿನ ಕಲಾವಿದೆ ಅರ್ಚನಾ ಪಾಟೀಲ ವಿರುದ್ದ ಪೋಕ್ಸೊ ಪ್ರಕರಣ ದಾಖಲಾಗಿದ್ದು ಈ ಸಂಬಂಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ
‘ಪೋಕ್ಸೊ ಕಾಯ್ದೆಗೆ ಬಾಲಕ-ಬಾಲಕಿ ಎಂಬ ಲಿಂಗಬೇಧವಿಲ್ಲ. ಹೂವಿನಂತೆ ಅರಳಬೇಕಾದ ವಯೋಮಾನದಲ್ಲಿ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಯಲು ರೂಪಿಸಿರುವ ಕಠಿಣ ಶಾಸನವಾಗಿದೆ’ ಎಂದು ಪೋಕ್ಸೊಕಾಯ್ದೆಯನ್ನು ವಿಶದಪಡಿಸಿದ್ದ ಹೈಕೋರ್ಟ್, ದೇಶದಲ್ಲೇ ಮೊದಲು ಎನ್ನಬಹುದಾದ ಪ್ರಕರಣವೊಂದರಲ್ಲಿ ಮಹಿಳೆಯ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ರದ್ದುಪಡಿಸಲು ಆಗಸ್ಟ್ 18ರಂದು ನಿರಾಕರಿಸಿತ್ತು.
ಇದನ್ನ ಪ್ರಶ್ನಿಸಿ ಪ್ರಕರಣದ ಆರೋಪಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಹಾಗೂ ಸತೀಶ್ ಚಂದ್ರ ಶರ್ಮಾ ಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನಿರ್ದೇಶನ ನೀಡಿದೆ.
ಹಾಗೆಯೇ ಕಲಾವಿದೆ ಅರ್ಚನಾ ಪಾಟೀಲ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಆರೋಪಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ದಾರ್ಥ ಲೂತ್ರಾ, ‘ಪೋಕ್ಕೊ ಕಾಯ್ದೆಯ ಸೆಕ್ಷನ್ 3(1)(ಎ) ರಿಂದ 3(1)(ಸಿ) ವರೆಗಿನ ಸೆಕ್ಷನ್ಗಳು ನಿರ್ದಿಷ್ಟ ಲಿಂಗದವರಿಗೆ ಅನ್ವಯವಾಗುತ್ತದೆ. ಈ ಪ್ರಕರಣಕ್ಕೆ ಅನ್ವಯ ಆಗುವುದಿಲ್ಲ ಎಂದು ವಾದಿಸಿದರು.
ಚಿತ್ರಕಲೆ ಹೇಳಿಕೊಡುವುದಾಗಿ ಮನೆಗೆ ಕರೆಸಿಕೊಂಡು 13 ವರ್ಷದ ನನ್ನ ಮಗನ ಮೇಲೆ ಅರ್ಚನಾ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕನ ತಾಯಿ ಎಚ್ಎಎಲ್ ಠಾಣೆಗೆ 2024ರ ಜೂನ್ 6ರಂದು ದೂರು ದಾಖಲಿಸಿದ್ದರು.
ಈ ನಡಿವೆ ‘ನನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿ ಆರೋಪಿತ ಮಹಿಳೆಯು ಹೈಕೋರ್ಟ್ ಮೆಟ್ಟಿಲೇರಿದ್ದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
