ಸಂಭಾವ್ಯ ಅಪರಾಧ ಕೃತ್ಯ: ತಕ್ಷಣವೇ ಈIಖ ದಾಖಲು ಕಡ್ಡಾಯವಲ್ಲ – ಹೈಕೋರ್ಟ್
ಬೆಂಗಳೂರು: ಸಂಭವನೀಯ ಅಪರಾಧ ಕೃತ್ಯದ ಬಗ್ಗೆ ಪೊಲೀಸರು ದೂರವಾಣಿ ಮೂಲಕ ಮಾಹಿತಿ ಪಡೆದ ಸಂದರ್ಭದಲ್ಲಿ ಆ ಕುರಿತು ತಕ್ಷಣವೇ ಎಫ್ ಐಆರ್ ದಾಖಲಿಸುವುದು ಕಡ್ಡಾಯವಲ್ಲ. ಮಾಹಿತಿ ಪಡೆದ ಕೂಡಲೇ ಅಪರಾಧ ಕೃತ್ಯ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದು ಪೊಲೀಸ್ ಅಧಿಕಾರಿಯ ಮೊದಲ ಕರ್ತವ್ಯವಾಗಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
‘ಮಾನವ ಕಳ್ಳಸಾಗಣೆ’ಗಾಗಿ ನಕಲಿ ಪಾಸ್ಪೋರ್ಟ್ ಸಿದ್ಧಪಡಿಸಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದು ಕೋರಿ ಇನ್ಸಾಲ್ ಅಹ್ಮದ್ ಎಂಬಾತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಸಂಭವನೀಯ ಅಪರಾಧ ಕೃತ್ಯದ ಮಾಹಿತಿ ಪಡೆದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ತಕ್ಷಣವೇಎಫ್ ಐಆರ್ ದಾಖಲಿಸುವುದು ಕಡ್ಡಾಯವಲ್ಲ. ಈ ಸಂದರ್ಭಗಳಲ್ಲಿ ವಿಳಂಬವಾಗಿ ದಾಖಲಿಸಿದ ಎಫ್ ಐಆರ್ ಕೂಡ ಮಾನ್ಯವಾಗುತ್ತದೆ. ಎಫ್ಐಆರ್ ವಿಳಂಬ ಎಂದಾಕ್ಷಣ ತನಿಖಾ ಪ್ರಕ್ರಿಯೆ ಅಮಾನ್ಯವಲ್ಲಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಒಂದೊಮ್ಮೆ ಅವರ ಸಮ್ಮುಖದಲ್ಲಿ ಅಪರಾಧ ಕೃತ್ಯ ನಡೆದರೆ ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ (ಅಡಿPಅ) ಸೆಕ್ಷನ್ 41 ಪ್ರಕಾರ ಕಾನೂನು ಕ್ರಮ ಕೈಗೊಳ್ಳಬೇಕು. ನಂತರ ಕಾಗ್ನಿಸೆಬಲ್ ಅಪರಾಧ ಕೃತ್ಯ ನಡೆದಿರುವ ಸನ್ನಿವೇಶದಲ್ಲಿ ಅಡಿPಅ ಸೆಕ್ಷನ್ 154ರ ಪ್ರಕಾರ ಈIಖ ದಾಖಲಿಸಬೇಕಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
