07/03/2026

Law Guide Kannada

Online Guide

ಸಂತ್ರಸ್ತೆಯನ್ನು ಆರೋಪಿ ಮದುವೆ ಆಗಿದ್ದಾನೆಂಬ ಕಾರಣಕ್ಕೆ ಅತ್ಯಾಚಾರ ಪ್ರಕರಣ ರದ್ದುಪಡಿಸಲಾಗದು – ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಒಪ್ಪಿದರೂ ಪ್ರಕರಣವನ್ನು ರದ್ದು ಪಡಿಸಲು ಸಾಧ್ಯವಿಲ್ಲ ಸಂತ್ರಸ್ತೆಯನ್ನು ಆರೋಪಿ ಮದುವೆ ಆಗಿದ್ದಾನೆಂಬ ಕಾರಣಕ್ಕೆ ಅತ್ಯಾಚಾರ ಪ್ರಕರಣ ರದ್ದುಪಡಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸುವಂತೆ ಮನವಿ ಮಾಡಿ ಅರ್ಜಿದಾರರು (ಆರೋಪಿ) ಹಾಗೂ ದೂರುದಾರರು (ಸಂತ್ರಸ್ತೆ) ಜಂಟಿಯಾಗಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅನಿಲ್ ಮತ್ತೊಬ್ಬರ ವಿರುದ್ಧ ಕರ್ನಾಟಕ ರಾಜ್ಯ” ಪ್ರಕರಣದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.

ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ವಿಜಯಪುರದ ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಜಂಟಿಯಾಗಿ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಅತ್ಯಾಚಾರ ಗಂಭೀರ ಅಪರಾಧ ಕೃತ್ಯವಾಗಿದ್ದು, ಸಂತ್ರಸ್ತೆ ರಾಜಿಮಾಡಿಕೊಂಡಿದ್ದಾರೆ. ಆರೋಪಿಯು ಸಂತ್ರಸ್ತೆಯನ್ನು ಮದುವೆ ಆಗಿದ್ದಾನೆ ಎಂಬ ಕಾರಣಕ್ಕೆ ಪ್ರಕರಣವನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ:
ಆರೋಪಿಯು ಸಂತ್ರಸ್ತೆ ಜತೆ ಒಡನಾಟದಲ್ಲಿ ಇಟ್ಟುಕೊಂಡು ಆಕೆಯ ಜೊತೆ ಲೈಂಗಿಕ ಸಂಬಂಧ ಹೊಂದಿದ್ದನು. ಈ ಮೂಲಕ ಸಂತ್ರಸ್ತೆ ಗರ್ಭಿಣಿಯಾಗಿದ್ದರು. ಆ ಬಳಿಕ 2019ರಲ್ಲಿ ಆಕೆಯನ್ನು ಅಪಹರಿಸಿದ್ದ. ಈ ಬಗ್ಗೆ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಪೊಲೀಸ್ ಠಾಣೆಯ ಅತ್ಯಾಚಾರ ದಾಖಲಿಸಿಕೊಂಡಿದ್ದರು.

ಈ ಪ್ರಕರಣ ವಿಜಯಪುರದ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಮತ್ತು ಪೋಕ್ಸ್ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಜೈಲು ಸೇರಿರುವ ಆರೋಪಿ ಹಾಗೂ ಸಂತ್ರಸ್ತೆ ಜಂಟಿಯಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.