ಶಿಕ್ಷಕಿ ಮೇಲೆ ಅತ್ಯಾಚಾರ: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದದ ಪ್ರಕರಣ ರದ್ದಿಗೆ ಹೈಕೋರ್ಟ್ ನಕಾರ
ಬೆಂಗಳೂರು: ಶಿಕ್ಷಕಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಮೂವರ ವಿರುದ್ದ ದಾಖಲಾಗಿರುವ ಪ್ರಕರಣವನ್ನ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಮೂಡುಬಿದರೆಯ ಪೊಲೀಸ್ ಇನ್ ಸ್ಪೆಕ್ಟರ್ ಪಿ.ಜಿ. ಸಂದೇಶ್ ಸೇರಿ ಮೂವರ ವಿರುದ್ದ ಶಿಕ್ಷಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದುಪಡಿಸುವಂತೆ ಕೋರಿ ಪಿ.ಜಿ. ಸಂದೇಶ್ ಮತ್ತಿತರ ಆರೋಪಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅಧಿಕಾರಿ ವರ್ತನೆಗೆ ಕಿಡಿಕಾರಿತು. ಈ ಹಂತದಲ್ಲಿ ಪ್ರಕರಣ ರದ್ದುಪಡಿಸುವುದಿಲ್ಲ. ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಅದನ್ನು ಪ್ರಶ್ನಿಸಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿತು. ಇದನ್ನು ಆಲಿಸಿದ ಅರ್ಜಿದಾರರ ಪರ ವಕೀಲರು ಮನವಿಯನ್ನು ಹಿಂಪಡೆಯುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿ
