07/03/2026

Law Guide Kannada

Online Guide

ನ್ಯಾಯಾಧೀಶರಾಗಲು ವಕೀಲಿಕೆ ಕಡ್ಡಾಯ ಆದೇಶ ಮರುಪರಿಶೀಲಿಸಿ: ಸುಪ್ರೀಂಗೆ ಅರ್ಜಿ

ನವದೆಹಲಿ: ಸಿವಿಲ್ ಕೋರ್ಟ್ ನ್ಯಾಯಾಧೀಶರು ಜೂನಿಯರ್ ಡಿವಿಜನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಕೀಲಿಕೆಯ ವೃತ್ತಿ ಅನುಭವ ಕಡ್ಡಾಯ ಎಂಬ ತೀರ್ಪನ್ನ ಸುಪ್ರೀಂ ಕೋರ್ಟ್ ಮರುಪರಿಶೀಲಿಸಬೇಕು ಎಂದು ವಕೀಲರೊಬ್ಬರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

2025ರ ಮೇ 20ರಂದು ಈ ಕುರಿತು ಆದೇಶ ಹೊರಡಿಸಿದ್ದ ಸುಪ್ರೀಂಕೋರ್ಟ್ ನ್ಯಾಯಪೀಠ , ಈ ಆದೇಶದಲ್ಲಿ ಸಿವಿಲ್ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 3 ವರ್ಷಗಳ ವಕೀಲ ವೃತ್ತಿಯ ಅನುಭವ ಕಡ್ಡಾಯವಾಗಿ ಹೊಂದಿರಬೇಕು. ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಹೈಕೋರ್ಟ್ ಮತ್ತು ರಾಜ್ಯ ಸರಕಾರಗಳಿಗೆ ಸೂಚನೆ ನೀಡಿತ್ತು.

ಆದರೆ ಈ ಆದೇಶವನ್ನ ಮರುಪರಿಶೀಲಿಸಬೇಕು ಎಂದು ಸುಪ್ರೀಂಕೋರ್ಟ್ ಗೆ ಮನವಿ ಮಾಡಿ ವಕೀಲ ಚಂದ್ರಸೇನ್ ಯಾದವ್ ಅರ್ಜಿ ಸಲ್ಲಿಸಿದ್ದಾರೆ.

ಮೂರು ವರ್ಷಗಳ ಅಖಿಲ ವೃತ್ತಿ ಕಡ್ಡಾಯ ಎಂಬ ಆದೇಶದ ಮೂಲಕ ಸಂವಿಧಾನದ 14 ಮತ್ತು 16ನೇ ವಿಧಿ ಅಡಿ ನೀಡಿರುವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ. ಸಾರ್ವಜನಿಕ ಸೇವೆಯಲ್ಲಿ ಸಮಾನ ಮತ್ತು ನ್ಯಾಯಯುತ ಅವಕಾಶ ನೀಡಬೇಕು ಎಂಬ ತತ್ವದ ಮೇಲೂ ಈ ಆದೇಶ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ವಕೀಲರು ತಮ್ಮ ವಾದಪತ್ರದಲ್ಲಿ ಹೇಳಿದ್ದಾರೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.