04/07/2026

Law Guide Kannada

Online Guide

ಸುದೀರ್ಘಾವಧಿ ಸೇವೆಯ ಡಿಸಿಸಿ ಬ್ಯಾಂಕ್ ನಿರ್ದೇಶಕರ ಅನರ್ಹಗೊಳಿಸುವ ಅಧಿಕಾರ ನಿಬಂಧಕರಿಗಿಲ್ಲ- ಸಹಕಾರ ಇಲಾಖೆ ಸ್ಪಷ್ಟನೆ

ಬೆಂಗಳೂರು: 10 ವರ್ಷಗಳಿಗಿಂತ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕರನ್ನು ಅನರ್ಹಗೊಳಿಸುವ ಅಧಿಕಾರ ರಾಜ್ಯ ಸರ್ಕಾರವು ಕರ್ನಾಟಕ ಸಹಕಾರ ಸಂಘಗಳ ನಿಬಂಧಕರಿಗೆ ಇಲ್ಲ ಎಂದು ಕರ್ನಾಟಕ ಸಹಕಾರ ಇಲಾಖೆ ಸ್ಪಷ್ಟಪಡಿಸಿದೆ.

10 ವರ್ಷಗಳಿಗಿಂತ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕರನ್ನು ಅನರ್ಹಗೊಳಿಸುವ ಅಧಿಕಾರ ಇಲ್ಲ ಎಂದು ಕರ್ನಾಟಕ ಸಹಕಾರ ಸಂಘಗಳ ನಿಬಂಧಕರು ತಿಳಿಸಿದ್ದಾರೆ.

ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಕಾಯ್ದೆ, 2025 ಮೂಲಕ ಪರಿಚಯಿಸಲಾದ ಅವಧಿ ಮಿತಿಯನ್ನು ಮೀರಿ, ಎರಡು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳ ಕೆಲವು ನಿರ್ದೇಶಕರು 10 ವರ್ಷಗಳಿಗಿಂತ ಹೆಚ್ಚು ಕಾಲ ತಮ್ಮ ಹುದ್ದೆಯಲ್ಲಿ ಮುಂದುವರಿದಿದ್ದಾರೆ ಎಂಬ ಆರೋಪಗಳ ಕೇಳಿ ಬಂದಿತ್ತು. ಇದೀಗ ಈ ಕುರಿತು ಸ್ಪಷ್ಟನೆ ನೀಡಿರುವ ಕರ್ನಾಟಕ ಸಹಕಾರ ಇಲಾಖೆ, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949 ರ ಅಡಿಯಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ಗಳ(DCCBS) ನಿರ್ದೇಶಕರನ್ನು ಅನರ್ಹಗೊಳಿಸುವ ಅಧಿಕಾರವನ್ನು ರಾಜ್ಯ ಸರ್ಕಾರವು ಕರ್ನಾಟಕ ಸಹಕಾರ ಸಂಘಗಳ ನಿಬಂಧಕರಿಗೆ (RCS) ವಹಿಸಿಕೊಟ್ಟಿಲ್ಲ ಎಂದು ತಿಳಿಸಿದೆ ದೂರುದಾರರಿಗೆ ಕಳುಹಿಸಿದ ಪತ್ರದಲ್ಲಿ, Reserve Bank of India (RBI) ಈ ವಿಷಯವನ್ನು ಅಗತ್ಯ ಕ್ರಮಕ್ಕಾಗಿ National Bank for Agriculture and Rural Development (NABARD)ನ ಕರ್ನಾಟಕ ಪ್ರಾದೇಶಿಕ ಕಚೇರಿಗೆ ಕಳುಹಿಸಲಾಗಿದೆ ಎಂದು ತಿಳಿಸಿತು. ಬಳಿಕ ಓಂಃಂಖಆ, ಆರೋಪಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕದ ಸಹಕಾರ ಸಂಘಗಳ ನಿಬಂಧಕರಿಗೆ ಪತ್ರ ಬರೆದಿತ್ತು. ಆದರೆ, ಕರ್ನಾಟಕ ಸಹಕಾರ ಇಲಾಖೆ ತನ್ನ ಪತ್ರದಲ್ಲಿ, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯಡಿ ನಿರ್ದೇಶಕರನ್ನು ಅನರ್ಹಗೊಳಿಸುವ ಅಧಿಕಾರವನ್ನು ನಿಬಂಧಕರಿಗೆ ವಹಿಸಿಕೊಡಲಾಗಿಲ್ಲ ಎಂದು ತಿಳಿಸಿದೆ.

ಬ್ಯಾಂಕಿಂಗ್ ವಿಷಯವು ಸಂವಿಧಾನದ ಕೇಂದ್ರ ಪಟ್ಟಿಗೆ (Union List) ಸೇರಿರುವುದರಿಂದ, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯಡಿ ಇರುವ ಅನರ್ಹತೆ ಸಂಬಂಧಿತ ವಿಧಿಗಳನ್ನು ಜಾರಿಗೊಳಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ವಹಿಸಿಕೊಡಲಾಗಿಲ್ಲ. ಸಂಬಂಧಿತ ನಿರ್ದೇಶಕರು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ, 1959 ಹಾಗೂ ಕರ್ನಾಟಕ ಸಹಕಾರ ಸಂಘಗಳ ನಿಯಮಗಳು, 1960 ರ ಅನ್ವಯ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ರಾಜ್ಯ ಸಹಕಾರ ಕಾನೂನಿನಡಿ ಯಾವುದೇ ಅನರ್ಹತೆ ಇದ್ದಲ್ಲಿ, ಚುನಾವಣೆಯ ಸಮಯದಲ್ಲೇ ಚುನಾವಣಾ ಅಧಿಕಾರಿಗಳು ಅದನ್ನು ಪರಿಗಣಿಸಬಹುದಾಗಿತ್ತು. ಆದರೆ, ರಾಜ್ಯ ಕಾನೂನಿನಡಿ ಅವರು ಅನರ್ಹರಾಗಿರದ ಕಾರಣ, ಅವರು ನಿಯಮಾನುಸಾರವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಮುಂದುವರಿದು, ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 29ಅ ನಿರ್ದೇಶಕರ ಅನರ್ಹತೆಗೆ ಸಂಬಂಧಿಸಿದ ನಿಯಮಗಳನ್ನು ಹೊಂದಿದ್ದರೂ, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯಲ್ಲಿರುವ 10 ವರ್ಷದ ಅವಧಿ ಮಿತಿಗೆ ಸಂಬಂಧಿಸಿದ ವಿಧಿಗಳನ್ನು ಅದು ವಿಶೇಷವಾಗಿ ಅಳವಡಿಸಿಕೊಳ್ಳುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯಡಿ ಅಧಿಕಾರ ಹಸ್ತಾಂತರವಾಗದಿರುವ ಪರಿಸ್ಥಿತಿಯಲ್ಲಿ, 10 ವರ್ಷಗಳಿಗಿಂತ ಹೆಚ್ಚು ಅವಧಿಗೆ ಮಂಡಳಿಯಲ್ಲಿ ಸೇವೆ ಸಲ್ಲಿಸಿರುವುದನ್ನೇ ಏಕೈಕ ಆಧಾರವಾಗಿಸಿಕೊಂಡು ನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಲು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಅಥವಾ ನಿಯಮಗಳಲ್ಲಿ ಯಾವುದೇ ವ್ಯವಸ್ಥೆ ಇಲ್ಲ ಎಂದು ಇಲಾಖೆ ತಿಳಿಸಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.