23/04/2026

Law Guide Kannada

Online Guide

ಹಿಂದೂ, ಸಿಖ್, ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರವಾದರೆ Sಅ, Sಖಿ ಮೀಸಲಾತಿ ಸಿಗದು – ಸುಪ್ರೀಂಕೋರ್ಟ್

ನವದೆಹಲಿ,ಮಾರ್ಚ್,24,2026 (www.justkannada.in): ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ದಲಿತ ಸಮುದಾಯಕ್ಕೆ ಸೇರಿದವರು ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರವಾದರೆ ಮೀಸಲಾತಿ ಮತ್ತು ಎಸ್.ಸಿ ಸಮುದಾಯಕ್ಕೆ ಸಿಗುವ ಸೌಲಭ್ಯ ಸಿಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (ಎಸ್ಸಿ,ಎಸ್ಟಿ ಕಾಯ್ದೆ)ಯಡಿ ರಕ್ಷಣೆ ಕೇಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಮತ್ತು ಮನಮೋಹನ್ ಅವರ ಪೀಠವು ತೀರ್ಪು ನೀಡಿದೆ.

ಕ್ರಿಶ್ಚಿಯನ್ ಧರ್ಮದಂತಹ ಯಾವುದೇ ಇತರ ಧರ್ಮಕ್ಕೆ ಮತಾಂತರ(Conversion)ಗೊಂಡರೆ ಆ ವ್ಯಕ್ತಿ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾನೆ. ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಮತಾಂತರವಾದರೆ ಮೀಸಲಾತಿ ಇಲ್ಲ. ಎಸ್ ಸಿ ಸಮುದಾಯಕ್ಕೆ ಸಿಗುವ ಸೌಲಭ್ಯ ಮತ್ತು ಎಸ್ ಸಿ, ಎಸ್ ಟಿ ಕಾಯ್ದೆ ರಕ್ಷಣೆ ಸಿಗಲ್ಲ ಸ್ಪಷ್ಟಪಡಿಸಿದೆ.

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು ಪರಿಶಿಷ್ಟ ಜಾತಿಯ (SC-ST) ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅರ್ಹನಲ್ಲ. ಒಬ್ಬ ವ್ಯಕ್ತಿಯು ಕ್ರೈಸ್ತ ಧರ್ಮ ಅಥವಾ ಇತರ ಧರ್ಮಗಳಿಗೆ ಮತಾಂತರಗೊಂಡು ಅದನ್ನು ಅನುಸರಿಸುತ್ತಿದ್ದರೆ, ಅವರು ತಮ್ಮ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಪೀಠ ತಿಳಿಸಿದೆ.

ಆಂಧ್ರಪ್ರದೇಶ ಹೈಕೋರ್ಟ್ನ ಮೇ 2025 ರ ತೀರ್ಪಿನ ವಿರುದ್ಧ ಚಿಂತಾಡ ಆನಂದ್ ಎಂಬ ಪಾದ್ರಿ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಈ ತೀರ್ಪು ನೀಡಲಾಗಿದೆ. ಆನಂದ್ ಅವರು ಅಕ್ಕಲ ರಾಮಿರೆಡ್ಡಿ ಮತ್ತು ಇತರರಿಂದ ಜಾತಿ ತಾರತಮ್ಯ ಮತ್ತು ನಿಂದನೆಯನ್ನು ಎದುರಿಸಿದ್ದಾರೆ ಎಂದು ಆರೋಪಿಸಿದರು. ಅವರು ಅವರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದರು ಮತ್ತು ಪೊಲೀಸರು ಅದರ ಆಧಾರದ ಮೇಲೆ ಎಫ್ಐಆರ್ ದಾಖಲಿಸಿದ್ದರು. ನಂತರ ರಾಮಿರೆಡ್ಡಿ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋದರು.

ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ತಮ್ಮ ಎಸ್ಸಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ ಮತ್ತು ಆದ್ದರಿಂದ ಎಸ್ಸಿ, ಎಸ್ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎನ್ ಹರಿನಾಥ್ ಅವರು ಎಫ್ಐಆರ್ ಅನ್ನು ರದ್ದುಗೊಳಿಸಿದರು. ನಂತರ ಆನಂದ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.