06/03/2026

Law Guide Kannada

Online Guide

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 30 ವರ್ಷ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್

ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಅಪರಾಧಿಗೆ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯ 30 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲ ತಾಲೂಕಿನ ಸಾಚೆನ್ನಿ ಕೊಪ್ಪಿ ಗ್ರಾಮದ ಸ್ಟಪ್ಟಿಲ್ ಮಾನೆ ಶಿಕ್ಷೆಗೊಳಗಾದ ಅಪರಾಧಿ. 2023ರಲ್ಲಿ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗುವ ಜತೆಗೆ ಬಾಲಕಿ ಮೊಬೈಲ್ ಗೆ ಅಶ್ಲೀಲ ಚಿತ್ರ ಕಳುಹಿಸಿ ಜೀವ ಬೆದರಿಕೆ ಹಾಕಿದ್ದ ಎಂದು ಚಿಕ್ಕೋಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯ ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಅಪರಾಧಿಗೆ 30 ವರ್ಷ ಕಠಿಣ ಶಿಕ್ಷೆ ಮತ್ತು 2.63 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸಂತ್ರಸ್ತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದಿಂದ 4 ಲಕ್ಷ ರೂ. ಪರಿಹಾರ ವಿತರಿಸಲು ಸೂಚಿಸಿದ್ದಾರೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

Copyright © All rights reserved. | Newsphere by AF themes.