ಮಹಿಳಾ ಅಧಿಕಾರಿಯನ್ನು ಸೇವೆಯಿಂದ ಬಿಡುಗಡೆ ಮಾಡದಂತೆ ಸುಪ್ರೀಂ ನಿರ್ದೇಶನ
ನವದೆಹಲಿ: ಖಾಯಂ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ್ದ ಮಹಿಳಾ ಅಧಿಕಾರಿಯನ್ನು ಸೇವೆಯಿಂದ ಬಿಡುಗಡೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಮತ್ತು ಭಾರತೀಯ ವಾಯುಪಡೆಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಭಾರತೀಯ ವಾಯುಪಡೆಯ ಅಧಿಕಾರಿ ಕವಿತಾ ಅವರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಸರಕಾರ ಮತ್ತು ಭಾರತೀಯ ವಾಯುಪಡೆ ನಿರಾಕರಿತ್ತು. ಈ ಹಿನ್ನೆಲೆಯಲ್ಲಿ ಅನಗತ್ಯ ಕಾರಣಗಳಿಂದ ತಮ್ಮ ನೇಮಕಾತಿಯನ್ನು ಖಾಯಂ ಮಾಡದ ಕುರಿತು ಮಹಿಳಾ ಅಧಿಕಾರಿ ಕವಿತಾ ಅವರು ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ ಉಜ್ವಲ್ ಭುಯಾನ್ ಮತ್ತು ಮನಮೋಹನ್ ಅವರಿದ್ದ ನ್ಯಾಯಪೀಠ ಈ ನಿರ್ದೇಶನ ಹೊರಡಿಸಿದೆ.
ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಪೀಠವು, ಖಾಯಂ ನೇಮಕಾತಿ ಅರ್ಜಿ ನಿರಾಕರಿಸಲಾಗಿದ್ದ ಮಹಿಳಾ ಅಧಿಕಾರಿ ಕವಿತಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಬಾರದು ಎಂದು ತನ್ನ ಮಧ್ಯಂತರ ಆದೇಶ ನೀಡಿದೆ. ಕೇಂದ್ರ ಸರಕಾರಕ್ಕೆ ಮತ್ತು ಭಾರತೀಯ ವಾಯುಪಡೆಗೆ ಈ ಸೂಚನೆ ನೀಡಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ
