Compassionate employment Archives - Law Guide Kannada https://www.lawguidekannada.com/tag/compassionate-employment/ Online Guide Thu, 13 Nov 2025 04:05:03 +0000 en-US hourly 1 https://wordpress.org/?v=7.0 https://www.lawguidekannada.com/wp-content/uploads/2022/09/cropped-Logo_512-32x32.jpg Compassionate employment Archives - Law Guide Kannada https://www.lawguidekannada.com/tag/compassionate-employment/ 32 32 ದತ್ತು ಪುತ್ರನಿಗೂ `ಅನುಕಂಪದ ಆಧಾರದ ಉದ್ಯೋಗ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ https://www.lawguidekannada.com/adopted-son-to-be-given-compassionate-employment-karnataka-high-court-directs-government/ Thu, 13 Nov 2025 04:05:03 +0000 https://www.lawguidekannada.com/?p=2732 ಬೆಂಗಳೂರು : ದತ್ತು ಪುತ್ರನಿಗೂ `ಅನುಕಂಪದ ಆಧಾರದ ಮೇಲೆ ಉದ್ಯೋಗ ಒದಗಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ....

The post ದತ್ತು ಪುತ್ರನಿಗೂ `ಅನುಕಂಪದ ಆಧಾರದ ಉದ್ಯೋಗ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ appeared first on Law Guide Kannada.

]]>
ಬೆಂಗಳೂರು : ದತ್ತು ಪುತ್ರನಿಗೂ `ಅನುಕಂಪದ ಆಧಾರದ ಮೇಲೆ ಉದ್ಯೋಗ ಒದಗಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.

ಸರ್ಕಾರಿ ಉದ್ಯೋಗಿಯಾಗಿದ್ದ ತನ್ನ ತಾಯಿ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಉದ್ಯೋಗ ನೀಡುವಂತೆ ಕೋರಿದ್ದ ಮನವಿಯನ್ನ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಚಿತ್ರದುರ್ಗದ ಬೆಳಗೂರು ಗ್ರಾಮದ ನಿವಾಸಿ ಯೂನೀಸ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ಸೇವಾವಧಿಯಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮಹಿಳೆಯ ದತ್ತು ಪುತ್ರನಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸುವ ಕುರಿತ ಮನವಿಯನ್ನು ಎಂಟು ವಾರದಲ್ಲಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಚಿತ್ರದುರ್ಗದ ಜಿಲ್ಲೆಯ ಶ್ರೀರಾಂಪುರ ಹೋಬಳಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೈಮುನ್ನೀಸಾ ಎಂಬಾಕೆ ಉದ್ಯೋಗ ಮಾಡುತ್ತಿದ್ದರು. ಆಕೆಯು ಸೇವೆಯಲ್ಲಿದ್ದಾಗಲೇ ಅರ್ಜಿದಾರರನ್ನು ದತ್ತು ಪಡೆದಿದ್ದರು. ಈ ಕುರಿತು 2022ರ ಸೆಪ್ಟೆಂಬರ್ ವಿಲ್ ಸಹ ನೋಂದಣಿ ಮಾಡಿಸಿ, ಅರ್ಜಿದಾರ ತನ್ನ ಏಕ ಮಾತ್ರ ಉತ್ತರಾಧಿಕಾರಿ ಎಂದು ಘೋಷಣೆ ಮಾಡಿದ್ದರು.

ಈ ನಡುವೆ 2023ರ ಜೂ.3ರಂದು ಮೈಮುನ್ನೀಸಾ ನಿಧನ ಹೊಂದಿದ್ದು, ಇದರಿಂದ ಚಿತ್ರದುರ್ಗ ಜಿಲ್ಲೆಯ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 2023ರ ಡಿ.2ರಂದು ಮನವಿ ಪತ್ರ ಸಲ್ಲಿಸಿದ್ದ ಅರ್ಜಿದಾರ, ತಾಯಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ತನಗೆ ಅನುಕಂಪದ ಉದ್ಯೋಗ ನೀಡುವಂತೆ ಕೋರಿದ್ದರು. ಆದರೆ, ಮೈಮುನ್ನೀಸಾ ಅವರ ಹಣಕಾಸು ಸೌಲಭ್ಯ ಪಡೆಯಲು ಅರ್ಜಿದಾರ ಅರ್ಹನಾಗಿಲ್ಲ ಎಂದು ತಿಳಿಸಿ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಹಿಂಬರಹ ನೀಡಿದ್ದರು.

ಸರ್ಕಾರಿ ಉದ್ಯೋಗಿಯಾಗಿದ್ದ ತನ್ನ ತಾಯಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸುವಂತೆ ಕೋರಿ ತಾನು ಎರಡು ಬಾರಿ ಸಲ್ಲಿಸಿದ್ದ ಮನವಿ ಪತ್ರವನ್ನು ಪರಿಗಣಿಸದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಯೂನೀಸ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಮನವಿ ಪತ್ರ ಸಲ್ಲಿಕೆಯಾದರೆ ಅದನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವುದು ರಾಜ್ಯ ಸರ್ಕಾರದ ಕರ್ತವ್ಯ. ಸರ್ಕಾರಿ ವಕೀಲರು ಸಹ ಸೂಕ್ತ ಕಾಲಾವಕಾಶ ನೀಡಿದರೆ ಅರ್ಜಿದಾರರ ಮನವಿ ಪರಿಗಣಿಸಿ ಆದೇಶ ಹೊರಡಿಸಲಾಗುವುದು ಎಂದು ಕೋರಿದ್ದಾರೆ. ಇದರಿಂದ ಅರ್ಜಿ ಕುರಿತಂತೆ ನ್ಯಾಯಾಲಯ ಯಾವುದೇ ಆದೇಶ ಮಾಡುತ್ತಿಲ್ಲ. ಎಂಟು ವಾರಗಳಲ್ಲಿ ಅರ್ಜಿದಾರನ ಮನವಿ ಪತ್ರ ಪರಿಗಣಿಸಿ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಸೂಚಿಸಿತು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

The post ದತ್ತು ಪುತ್ರನಿಗೂ `ಅನುಕಂಪದ ಆಧಾರದ ಉದ್ಯೋಗ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ appeared first on Law Guide Kannada.

]]>
ಸರ್ಕಾರಿ ನೌಕರ ಮೃತಪಟ್ಟರೇ ಆತನ ಸಹೋದರಿಗೆ ಅನುಕಂಪದ ಆಧಾರದ ನೌಕರಿ ನೀಡಲು ಕಾನೂನಿನಲ್ಲಿ ಅವಕಾಶವಿದೆಯೇ..? https://www.lawguidekannada.com/is-it-permissible-in-law-to-give-compassionate-employment-to-the-sister-of-a-government-employee-who-has-died/ Mon, 20 Oct 2025 10:28:31 +0000 http://www.lawguidekannada.com/?p=2586 ಬೆಂಗಳೂರು: ಅವಲಂಬನೆಯನ್ನು ದೃಢೀಕರಿಸದಿದ್ದಾಗ ಅನುಕಂಪದ ಆಧಾರದ ನೌಕರಿಯನ್ನ ನೀಡಲಾಗದು. ಹೀಗಾಗಿ ಸರ್ಕಾರಿ ನೌಕರ ಮೃತಪಟ್ಟಲ್ಲಿ ಆತನ ಸಹೋದರಿಗೆ ಅನುಕಂಪದ ಆಧಾರದ...

The post ಸರ್ಕಾರಿ ನೌಕರ ಮೃತಪಟ್ಟರೇ ಆತನ ಸಹೋದರಿಗೆ ಅನುಕಂಪದ ಆಧಾರದ ನೌಕರಿ ನೀಡಲು ಕಾನೂನಿನಲ್ಲಿ ಅವಕಾಶವಿದೆಯೇ..? appeared first on Law Guide Kannada.

]]>
ಬೆಂಗಳೂರು: ಅವಲಂಬನೆಯನ್ನು ದೃಢೀಕರಿಸದಿದ್ದಾಗ ಅನುಕಂಪದ ಆಧಾರದ ನೌಕರಿಯನ್ನ ನೀಡಲಾಗದು. ಹೀಗಾಗಿ ಸರ್ಕಾರಿ ನೌಕರ ಮೃತಪಟ್ಟಲ್ಲಿ ಆತನ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ತುಮಕೂರು ಜಿಲ್ಲೆ ಗೆದ್ದಹಳ್ಳಿ ನಿವಾಸಿ ಪಲ್ಲವಿ ಎಂಬುವರು ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಹೋದರ ಮೃತಪಟ್ಟ ಹಿನ್ನೆಲೆಯಲ್ಲಿ ತನಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬೇಕೆಂದು ಕೋರಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಅವಲಂಬನೆ ದೃಢೀಕರಿಸದಿದ್ದಾಗ ಅನುಕಂಪದ ನೌಕರಿ ನೀಡಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿ ಅರ್ಜಿ ವಜಾಗೊಳಿಸಿದೆ.

ಮೇಲ್ಮನವಿದಾರರ ಸಹೋದರ (ಮೃತ ನೌಕರ) ಸಾವನ್ನಪ್ಪಿದ ವೇಳೆ ಅವರ ಆದಾಯದ ಮೇಲೆ ತಾನು ಅವಲಂಬಿಸಿದೆ ಎಂಬುದನ್ನು ದೃಢಪಡಿಸುವ ಯಾವುದೇ ಸಾಕ್ಷಿಯನ್ನು ಮೇಲ್ಮನವಿದಾರರು ಸಲ್ಲಿಸಿಲ್ಲ. ಹಾಗೆಯೇ ಅನುಕಂಪದ ಉದ್ಯೋಗ ಕ್ಷೇಮು ಸಮರ್ಥಿಸಿಕೊಳ್ಳಲು ಮೃತ ನೌಕರನ ಕುಟುಂಬವು ಆರ್ಥಿಕ ಮುಗ್ಗಟ್ಟಿಗೆ ತುತ್ತಾಗಿದೆ ಎಂಬುದನ್ನು ದೃಢಪಡಿಸಲು ದಾಖಲೆಗಳಿಲ್ಲ. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶ ಸೂಕ್ತವಾಗಿದ್ದು, ಈ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸಕಾರಣಗಳಿಲ್ಲ ಎಂದು ವಿಭಾಗೀಯ ನ್ಯಾಯಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿತು.

ಕರ್ನಾಟಕ ನಾಗರಿಕ ಸೇವೆಗಳ ಅನುಕಂಪದ ಆಧಾರದ ನೇಮಕಾತಿ ನಿಯಮಗಳು 1996ರ 2(1) (ಬಿ) ಪ್ರಕಾರ ಒಂದು ವೇಳೆ ಸರ್ಕಾರಿ ನೌಕರನಾಗಿರುವ ಪುರುಷ ಅನಾರೋಗ್ಯದಿಂದ ಸೇವಾವಧಿಯಲ್ಲಿ ಮೃತಪಟ್ಟಲ್ಲಿ ಅವರನ್ನು ಅವಲಂಬಿಸಿರುವ ವಿಧವಾ ಪತ್ನಿ, ಮಗ ಅಥವಾ ಮಗಳು (ಅವಿವಾಹಿತೆ, ವಿವಾಹಿತ, ವಿಚ್ಛೇದಿತೆ ಹಾಗೂ ವಿಧವೆ) ಅನುಕಂಪದ ಆಧಾರದ ಮೇಲೆ ಉದ್ಯೋಗ ಕೋರಬಹುದು ಎಂದು ಕಾನೂನು ಸ್ಪಷ್ಟಪಡಿಸುತ್ತದೆ. ಈ ವ್ಯಾಖ್ಯಾನದಲ್ಲಿ ಸಹೋದರಿಯನ್ನು ಸೇರಿಸಿಲ್ಲ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

The post ಸರ್ಕಾರಿ ನೌಕರ ಮೃತಪಟ್ಟರೇ ಆತನ ಸಹೋದರಿಗೆ ಅನುಕಂಪದ ಆಧಾರದ ನೌಕರಿ ನೀಡಲು ಕಾನೂನಿನಲ್ಲಿ ಅವಕಾಶವಿದೆಯೇ..? appeared first on Law Guide Kannada.

]]>