Section 1961 of the Advocates Act Archives - Law Guide Kannada https://www.lawguidekannada.com/tag/section-1961-of-the-advocates-act/ Online Guide Tue, 06 Jan 2026 12:32:41 +0000 en-US hourly 1 https://wordpress.org/?v=7.0 http://www.lawguidekannada.com/wp-content/uploads/2022/09/cropped-Logo_512-32x32.jpg Section 1961 of the Advocates Act Archives - Law Guide Kannada https://www.lawguidekannada.com/tag/section-1961-of-the-advocates-act/ 32 32 ವೃತ್ತಿ ಘನತೆ ಕುಂದಿಸಿದ ಆರೋಪ: ಐವರು ವಕೀಲರ ಸನ್ನದು ಅಮಾನತು http://www.lawguidekannada.com/accused-of-defaming-the-profession-licenses-of-five-lawyers-suspended/ Tue, 06 Jan 2026 12:32:09 +0000 https://www.lawguidekannada.com/?p=3164 ತಾವು ಕಾನೂನು ಸಲಹೆ ನೀಡುತ್ತಿದ್ದೇವೆ ಎಂದು ರೀಲ್ಸ್ ಮೂಲಕ ಹೇಳಿಕೊಂಡು ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಐವರು ವಕೀಲರ ಸನ್ನದನ್ನು ಅಮಾನತುಗೊಳಿಸಿ...

The post ವೃತ್ತಿ ಘನತೆ ಕುಂದಿಸಿದ ಆರೋಪ: ಐವರು ವಕೀಲರ ಸನ್ನದು ಅಮಾನತು appeared first on Law Guide Kannada.

]]>
ತಾವು ಕಾನೂನು ಸಲಹೆ ನೀಡುತ್ತಿದ್ದೇವೆ ಎಂದು ರೀಲ್ಸ್ ಮೂಲಕ ಹೇಳಿಕೊಂಡು ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಐವರು ವಕೀಲರ ಸನ್ನದನ್ನು ಅಮಾನತುಗೊಳಿಸಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್ಬಿಸಿ) ಮಹತ್ವದ ಆದೇಶ ಹೊರಡಿಸಿದೆ.

ಬೆಂಗಳೂರಿನ ವಿನಯ್ ಕುಮಾರ್, ಜಿ. ಮಂಜುನಾಥ್, ರೇಣುಕಾ ದೇವಿ ಅಲಿಯಾಸ್ ರೇಣುಕಾ ಹಿರೇಮಠ, ಮೈಸೂರಿನ ವಿ. ರವಿಕುಮಾರ್ ಮತ್ತು ಹುಣಸೂರಿನ ಎನ್. ಪುಟ್ಟೇಗೌಡ ಅವರ ಸನ್ನದನ್ನು ಅಮಾನತುಗೊಳಿಸಲಾಗಿದೆ.

ಕಾನೂನು ಸಲಹೆ ನೀಡುವ ನೆಪದಲ್ಲಿ ವಾಣಿಜ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಈ ಐವರು ವಕೀಲರು ವೃತ್ತಿ ಘನತೆಯನ್ನು ಕುಂದಿಸಿದ್ದಾರೆ. ಸಾಮಾಜಿಕ ಮಾಧ್ಯಮ ಮತ್ತು ಇತರೆಡೆ ರೀಲ್ಸ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸು ಗಳನ್ನು ಒಪ್ಪಿಕೊಂಡು ಐದು ಮಂದಿಯ ಸನ್ನದು ಅಮಾನತುಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ತಿಳಿಸಿದೆ.

ಆನ್ ಲೈನ್ ವೇದಿಕೆಗಳಲ್ಲಿ ಪ್ರಚಾರ ಚಟುವಟಿಕೆ ನಡೆಸುವುದು ವೃತ್ತಿಪರತೆಗೆ ವಿರುದ್ದವೆಂದು ಮದ್ರಾಸ್ ಹೈಕೋರ್ಟ್ ಪ್ರಕರಣವೊಂದರಲ್ಲಿ ನೀಡಿರುವ ತೀರ್ಪಿನ ಅನುಸಾರ ಬಿಸಿಐ 2024ರ ಜು.8ರಂದು ಅಕ್ರಮ ಚಟುವಟಿಕೆಗಳ ಕುರಿತು ವಕೀಲರಿಗೆ ಎಚ್ಚರಿಕೆ ನೀಡಿತ್ತು. ಅಲ್ಲದೇ, ಅನುಮತಿ ಪಡೆಯದೆ, ಆನ್ ಲೈನ್ ವೇದಿಕೆಗಳಲ್ಲಿ ಪ್ರಚಾರಕ್ಕೆ ಇಳಿದಿರುವ ವಕೀಲರ ವಿರುದ್ಧ ತಕ್ಷಣ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ವಕೀಲರ ಪರಿಷತ್ ಗಳಿಗೆ ಬಿಸಿಐ ನಿರ್ದೇಶನ ನೀಡಿತ್ತು.

ಭಾರತೀಯ ವಕೀಲರ ಪರಿಷತ್ (ಬಿಸಿಐ) ನಿಯಮ 36, ವಕೀಲರ ಕರ್ತವ್ಯಕ್ಕೆ ಸಂಬಂಧಿಸಿದ್ದಾಗಿದ್ದು, ವಕೀಲರು ತಮ್ಮ ಕೆಲಸವನ್ನು ಯಾವುದೇ ರೀತಿಯಲ್ಲೂ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಯಾವುದೇ ವಿಧಾನ ಅಥವಾ ಮಾಧ್ಯಮ ಬಳಸಿ ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ. ಇದರ ಉಲ್ಲಂಘನೆಯು ವಕೀಲರ ಕಾಯಿದೆ ಸೆಕ್ಷನ್ 1961ರ ಪ್ರಕಾರ ಶಿಸ್ತು ಕ್ರಮಕ್ಕೆ ಆಸ್ಪದ ನೀಡಲಿದೆ.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿ

The post ವೃತ್ತಿ ಘನತೆ ಕುಂದಿಸಿದ ಆರೋಪ: ಐವರು ವಕೀಲರ ಸನ್ನದು ಅಮಾನತು appeared first on Law Guide Kannada.

]]>