ಹೈಕೋರ್ಟ್ ಸಿಜೆ ಸುಪ್ರೀಂಕೋರ್ಟ್ ಗೆ: ಕೊಲಿಜಿಯಂ ನಿರ್ಧಾರ

ನವದೆಹಲಿ : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರ ಪದೋನ್ನತಿಯಿಂದ ತೆರವಾಗುವ ಸ್ಥಾನಕ್ಕೆ ಹೈಕೋರ್ಟ್ ನ್ಯಾಯಮೂರ್ತಿ, ಕನ್ನಡಿಗರೇ ಆದ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೊಲಿಜಿಯಂ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು. ಕೇಂದ್ರ ಸರಕಾರಕ್ಕೆ ಮುಂದಿನ ಆದೇಶಕ್ಕಾಗಿ ಶಿಫಾರಸು ಮಾಡಲಾಗಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ