ನ್ಯಾಯಾಂಗದಲ್ಲಿ ಪಾರದರ್ಶಕತೆ: ತಮ್ಮ ಆಸ್ತಿ ವಿವರ ಘೋಷಿಸಿಕೊಂಡ ಸುಪ್ರೀಂಕೋರ್ಟ್ ನ್ಯಾಯಾಧೀಶರು

ನವದೆಹಲಿ: ನ್ಯಾಯಾಂಗದ ಪಾರದರ್ಶಕತೆ ಮತ್ತು ನಂಬಿಕೆಯನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲು ಮತ್ತು ನ್ಯಾಯಾಲಯದ ವೆಬ್ಸೈಟ್ಗೆ ಅಪ್ಲೋಡ್ ಮಾಡಲು ಒಪ್ಪಿಕೊಂಡಿರುವ ಬೆನ್ನಲ್ಲೇ ಹಲವು ನ್ಯಾಯಾಧೀಶರು ತಮ್ಮ ಆಸ್ತಿಯ ವಿವರಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ.
ನ್ಯಾಯಾಂಗದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಸುಪ್ರೀಂ ಕೋರ್ಟ್ ತನ್ನ ವೆಬ್ ಸೈಟ್ನಲ್ಲಿ ನ್ಯಾಯಾಧೀಶರ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಅಪ್ಲೋಡ್ ಮಾಡಿದೆ.
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಸ್ತಿ ಘೋಷಣೆಯನ್ನು ಬಹಿರಂಗಪಡಿಸಲಾಗಿದೆ. ಪ್ರಸ್ತುತ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ಮುಂದಿನ ದಿನಗಳಲ್ಲಿ ಸಿಜೆಐ ಆಗಲಿರುವ ಮೂವರು ನ್ಯಾಯಾಧೀಶರು ಸೇರಿದಂತೆ ಇಪ್ಪತ್ತು ಇತರ ನ್ಯಾಯಾಧೀಶರ ಘೋಷಣೆಗಳನ್ನು ಅಪ್ ಲೋಡ್ ಮಾಡಲಾಗಿದೆ.
ಏಪ್ರಿಲ್ 1 ರಂದು ಸಿಜೆಐ ಸಂಜೀವ್ ಖನ್ನಾ ನೇತೃತ್ವದಲ್ಲಿ ನಡೆದ ಪೂರ್ಣ ನ್ಯಾಯಾಲಯದ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ನ್ಯಾಯಾಧೀಶರು ತಮ್ಮ ಘೋಷಣೆಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಸಭೆಯಲ್ಲಿ ಒಪ್ಪಿಕೊಂಡಿದ್ದರು. ದೆಹಲಿ ಹೈಕೋರ್ಟ್ ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ಪತ್ತೆಯಾದ ಬೆನ್ನಲ್ಲೆ ಇದು ಭಾರಿ ವಿವಾದ ಉಂಟಾಗಿತ್ತು. ನಂತರ ನ್ಯಾಯಾದೀಶರು ತಮ್ಮ ಆಸ್ತಿ ವಿವರ ಘೋಷಣೆಗೆ ನಿರ್ಧಾರ ಕೈಗೊಂಡಿದ್ದರು.
ತಮ್ಮ ಆಸ್ತಿ ವಿವರ ಘೋಷಣೆ ಪ್ರಕಟಿಸಿಕೊಂಡ ನ್ಯಾಯಾಧೀಶರ ಪಟ್ಟಿ ಹೀಗಿದೆ.
1 ಸಿಜೆಐ ಸಂಜೀವ್ ಖನ್ನಾ
2 ನ್ಯಾಯಮೂರ್ತಿ ಬಿ.ಆರ್. ಗವಾಯಿ
3 ನ್ಯಾಯಮೂರ್ತಿ ಸೂರ್ಯ ಕಾಂತ್
4 ನ್ಯಾಯಮೂರ್ತಿ ಅಭಯ್ ಎಸ್. ಓಕಾ
5 ನ್ಯಾಯಮೂರ್ತಿ ವಿಕ್ರಮ್ ನಾಥ್
6 ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ
7 ನ್ಯಾಯಮೂರ್ತಿ ಬಿ.ವಿ. ನಾಗರತ್ನ
8 ನ್ಯಾಯಮೂರ್ತಿ ಎಂ.ಎಂ. ಸುಂದರೇಶ್
9 ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ
10 ನ್ಯಾಯಮೂರ್ತಿ ಪಮಿದಿಘಂಟಂ ಶ್ರೀ ನರಸಿಂಹ
11 ನ್ಯಾಯಮೂರ್ತಿ ಸುಧಾಂಶು ಧುಲಿಯಾ
12 ನ್ಯಾಯಮೂರ್ತಿ ಜಮ್ಶೆಡ್ ಬುರ್ಜೋರ್ ಪರ್ದಿವಾಲಾ
13 ನ್ಯಾಯಮೂರ್ತಿ ದೀಪಂಕರ್ ದತ್ತ
14 ನ್ಯಾಯಮೂರ್ತಿ ಪಂಕಜ್ ಮಿಥಲ್
15 ನ್ಯಾಯಮೂರ್ತಿ ಸಂಜಯ್ ಕರೋಲ್
16 ನ್ಯಾಯಮೂರ್ತಿ ಸಂಜಯ್ ಕುಮಾರ್
17 ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ
18 ನ್ಯಾಯಮೂರ್ತಿ ಮನೋಜ್ ಮಿಶ್ರಾ
19 ನ್ಯಾಯಮೂರ್ತಿ ರಾಜೇಶ್ ಬಿಂದಾಲ್
20 ನ್ಯಾಯಮೂರ್ತಿ ಅರವಿಂದ್ ಕುಮಾರ್
21 ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ
22 ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್
23 ನ್ಯಾಯಮೂರ್ತಿ ಉಜ್ಜಲ್ ಭುಯಾನ್
24 ನ್ಯಾಯಮೂರ್ತಿ ಎಸ್.ವೆಂಕಟನಾರಾಯಣ ಭಟ್ಟಿ
25 ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ
26 ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಾಸಿಹ್
27 ನ್ಯಾಯಮೂರ್ತಿ ಸಂದೀಪ್ ಮೆಹ್ತಾ
28 ನ್ಯಾಯಮೂರ್ತಿ ಪ್ರಸನ್ನ ಭಾಲಚಂದ್ರ ವರಾಳೆ
29 ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್
30 ನ್ಯಾಯಮೂರ್ತಿ ಆರ್. ಮಹಾದೇವನ್
31 ನ್ಯಾಯಮೂರ್ತಿ ಮನಮೋಹನ್
32 ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್
33 ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ