19/05/2025

Law Guide Kannada

Online Guide

ದಾಂಪತ್ಯ ಕಲಹದಲ್ಲಿ ಮೊಬೈಲ್ ರೆಕಾರ್ಡ್ ಸಾಕ್ಷಿ ಪರಿಗಣನೆ ಸಾಧ್ಯವಿಲ್ಲ ಏಕೆ..? ಸ್ಪಷ್ಟ ಕಾರಣ ಕೊಟ್ಟ ಹೈಕೋರ್ಟ್

ಛತ್ತೀಸ್ ಗಢ: ದಾಂಪತ್ಯ ಕಲಹಗಳಲ್ಲಿ ಯಾವುದೇ ಸಂದರ್ಭದಲ್ಲೂ ಮೊಬೈಲ್ ರೆಕಾರ್ಡಿಂಗ್ ಅನ್ನು ಸಾಕ್ಷಿಯನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಛತ್ತೀಸ್ ಗಢ ಹೈಕೋರ್ಟ್ ಸ್ಪಷ್ಟಪಡಿಸಿದ್ದು, ಇದಕ್ಕೆ ಸ್ಪಷ್ಟ ಕಾರಣವನ್ನ ನೀಡಿದೆ.

ಪತಿ-ಪತ್ನಿಯರ ನಡುವಿನ ಮೊಬೈಲ್ ರೆಕಾರ್ಡಿಂಗ್ ನ್ನು ಸಾಕ್ಷಿಯಾಗಿ ಪ್ರಸ್ತುತ ಪಡಿಸಲು ಅನುಮತಿ ನೀಡಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದ ಛತ್ತೀಸ್ ಗಢ ಹೈಕೋರ್ಟ್, ಪರಸ್ಪರ ಒಪ್ಪಿಗೆ ಇಲ್ಲದೆ ಮೊಬೈಲ್ ಕರೆಗಳನ್ನು ರೆಕಾರ್ಡ್ ಮಾಡುವುದು ಸಂವಿಧಾನದ 21ನೇ ವಿಧಿ ಅಡಿಯಲ್ಲಿ ಗೌಪ್ಯತೆಯ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ಹೇಳಿದೆ.

ತಮ್ಮ ಮತ್ತು ಪತ್ನಿ ನಡುವಿನ ಸಂಭಾಷಣೆಯನ್ನು ತಮಗೆ ತಿಳಿಯದೆ ರಹಸ್ಯವಾಗಿ ರೆಕಾರ್ಡ್ ಮಾಡಲಾಗಿದೆ. ಈ ಕ್ರಮವು ಸಂವಿಧಾನಿಕ ಹಕ್ಕುಗಳ ನೇರ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.

ಪ್ರಕರಣದ ಹಿನ್ನೆಲೆ
ಛತ್ತೀಸ್ ಘಡದ ಮಹಾಸಮುಂದ್ ಜಿಲ್ಲೆಯಲ್ಲಿ ಪತಿಯಿಂದ ಜೀವನಾಂಶವನ್ನು ಪಡೆಯಲು ಪತ್ನಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ವೇಳೆ ಪತಿಯು ತನ್ನ ಪತ್ನಿ ಜೊತೆಗಿನ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ನ್ಯಾಯಾಲಯದಲ್ಲಿ ಹಾಜರುಪಡಿಸಲು ಕೋರ್ಟ್ ಅನುಮತಿ ಕೋರಿದರು.

ಪತಿ ತನ್ನ ಪತ್ನಿಯ ಸ್ವಭಾವದ ಬಗ್ಗೆ ಆರೋಪ ಮಾಡಿದ್ದರು. ನ್ಯಾಯಾಲಯವು ಪತಿಯ ಬೇಡಿಕೆಯನ್ನು ಅಂಗೀಕರಿಸಿ ರೆಕಾರ್ಡಿಂಗ್ ಅನ್ನು ಸಾಕ್ಷಿಯಾಗಿ ತೆಗೆದುಕೊಂಡಿತು. ಕೌಟುಂಬಿಕ ನ್ಯಾಯಾಲಯದ ಈ ತೀರ್ಪಿನ ವಿರುದ್ಧ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.